ಬೆಂಗಳೂರು:ಬುಧವಾರದ (ಏ.8) ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 10 ಹೊಸ ಕರೊನಾ ಸೋಂಕು ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ 191ಕ್ಕೆ ಏರಿದೆ. ಇಂದು ಬೆಳಗ್ಗೆ ಮೃತಪಟ್ಟ ಗದಗ ಜಿಲ್ಲೆಯ ವೃದ್ಧೆ ಸೇರಿದಂತೆ ಸಾವಿನ ಸಂಖ್ಯೆ ಆರಕ್ಕೆ ಏರಿದೆ. 28 ಮಂದಿಯನ್ನು ವಿವಿಧ ಅಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ.
ಬಾಗಲಕೋಟೆಯ ಮೂವರು, ಮೈಸೂರು ಹಾಗೂ ಬೆಂಗಳೂರಿನ ತಲಾ ಇಬ್ಬರು, ಬೆಳಗಾವಿ, ಮಂಡ್ಯ ಹಾಗೂ ಚಿಕ್ಕಬಳ್ಳಾಪುರದ ತಲಾ ಒಬ್ಬರಲ್ಲಿ ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದೆ. ನಾಳೆ (ಏ.9)ರಂದು ನಡೆಸಲು ಉದ್ದೇಶಿಸಲಾಗಿದ್ದ ಶಾಬ್‌-ಎ-ಬರಾತ್‌ ಸಾರ್ವಜನಿಕರ ಭೇಟಿಯನ್ನು ರದ್ದುಗೊಳಿಸಲಾಗಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
