ಬೆಂಗಳೂರು:ರಾಜ್ಯದಲ್ಲಿ 2030ರೊಳಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ, ಸಂಶೋಧನೆಗೆ 6 ಹಾಗೂ ಬೋಧನೆ ಉದ್ದೇಶದಿಂದ 10 ಪ್ರತ್ಯೇಕ ವಿಶ್ವವಿದ್ಯಾಲಯ ಪ್ರಾರಂಭ ಹಾಗೂ 34 ಸ್ವಾಯತ್ತ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಗುರಿ ಹೊಂದಿರುವ ಶೈಕ್ಷಣಿಕ ಕ್ಷೇತ್ರದ ಸಮಗ್ರ ನೀಲಿನಕ್ಷೆ ಸಿದ್ಧವಾಗುತ್ತಿದೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ರಚಿಸಲಾಗಿರುವ ಕಾರ್ಯಪಡೆಯ ಜತೆ ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೋಮವಾರ ಸಭೆ ನಡೆಸಿ ಅನುಷ್ಠಾನದ ಕುರಿತಂತೆ ರ್ಚಚಿಸಿದರು.
ಹೊಸ ವಿಶ್ವವಿದ್ಯಾಲಯಗಳು, ಶೈಕ್ಷಣಿಕ ಸಂಸ್ಥೆಗಳ ಮೂಲಕ ಪ್ರತಿ ಜಿಲ್ಲೆಯಲ್ಲೂ ಗುಣಮಟ್ಟದ ಶಿಕ್ಷಣ, ಬೋಧನೆ, ಸಂಶೋಧನೆಗೆ ಪೂರಕವಾದ ಮುಕ್ತ ಅವಕಾಶ ಕಲ್ಪಿಸುವುದಾಗಿ ಡಿಸಿಎಂ ಅಶ್ವತ್ಥನಾರಾಯಣ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಿಕ್ಷಣ ನೀತಿ ಕುರಿತ ಕರಡು ಪ್ರತಿಯನ್ನು ಕಾರ್ಯಪಡೆ ನಾಲ್ಕೈದು ದಿನಗಳಲ್ಲಿ ಸರ್ಕಾರಕ್ಕೆ ನೀಡಲಿದೆ. ಈ ತಿಂಗಳ 29ರೊಳಗೆ ನೀತಿಯ ಸಮಗ್ರ ಜಾರಿ ಬಗ್ಗೆ ಪರಿಪೂರ್ಣ ನೀಲಿನಕ್ಷೆ (ರೋಡ್ ಮ್ಯಾಪ್) ಸಲ್ಲಿಸಲಿದೆ. ಇದಾದ ಬಳಿಕ ಸಚಿವ ಸುರೇಶ್ ಕುಮಾರ್ ಅವರನ್ನೊಳಗೊಂಡು ಸಿಎಂ ಜತೆ ಸಮಾಲೋಚಿಸಲಾಗುವುದು. ನೀತಿ ಜಾರಿಗೆ ಅಗತ್ಯವಾಗಿರುವ ಕಾನೂನು ತಿದ್ದುಪಡಿ, ಆಡಳಿತ ಸುಧಾರಣೆ ಮತ್ತು ಸಂಪನ್ಮೂಲ ಕೊ್ರೕಢಿಕರಣದ ಬಗ್ಗೆ ಕ್ಷಿಪ್ರಗತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಬಲವಾದ ರಾಜಕೀಯ ಇಚ್ಛಾಶಕ್ತಿ , ಬದ್ಧತೆಯಿಂದ ನೀತಿ ಜಾರಿಗೊಳಿಸಲಾಗುವುದೆಂದರು.
ಸದ್ಯಕ್ಕೆ ರಾಜ್ಯ ನೆರೆ, ಕೋವಿಡ್ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಅದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಂದಡಿ ಇಡಲಾಗುವುದು. ಆ ದಾರಿಯಲ್ಲಿ ಸರ್ಕಾರಕ್ಕೆ ನಮ್ಮ ಕಾರ್ಯಪಡೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಪ್ರೊ. ತೇಜಸ್ವಿ ಕಟ್ಟಿಮನಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ರಚಿಸಿರುವ ಕಾರ್ಯಪಡೆ ಅಧ್ಯಕ್ಷ ಎಸ್.ವಿ.ರಂಗನಾಥ್, ಸದಸ್ಯರಾದ ವಿಶ್ರಾಂತ ಕುಲಪತಿ ಪ್ರೊ. ಬಿ.ತಿಮೆ್ಮೕಗೌಡ, ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅನುರಾಗ್ ಬೆಹರ್, ಬೆಂಗಳೂರು ವಿವಿ ಕುಲಪತಿ ಪ್ರೊ. ವೇಣುಗೋಪಾಲ್, ಸೃಷ್ಟಿ ಸಂಸ್ಥೆ ನಿರ್ದೇಶಕಿ ಡಾ. ಗೀತಾ ನಾರಾಯಣನ್, ಪದವಿ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಮತ್ತಿತರ ಪ್ರಮುಖರು ಸಭೆಯಲ್ಲಿದ್ದರು.
ರಾಜ್ಯವ್ಯಾಪಿ ಆಂದೋಲನ:ಎಲ್ಲ ರಾಜಕೀಯ ಮುಖಂಡರು, ಸಂಘ ಸಂಸ್ಥೆ ಹಾಗೂ ಸಮಾಜದ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು, ಅದಕ್ಕಾಗಿ ರಾಜ್ಯವ್ಯಾಪಿ ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗುವುದು. ಇದರಲ್ಲಿ ಇಡೀ ಸರ್ಕಾರ ಭಾಗಿಯಾಗಲಿದೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದರು.
ಕಾರ್ಯಪಡೆ ಸದಸ್ಯರ ಸಲಹೆ
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಅದರ ಎಲ್ಲ ಗುರಿಗಳನ್ನು ಮುಂದಿನ 10 ವರ್ಷದಲ್ಲಿ ತಲುಪುವ ಉದ್ದೇಶವಿದೆ. ನೀತಿ ಅನುಷ್ಠಾನದ ಎಲ್ಲ ಫಲಿತಾಂಶಗಳು ಈ ಅವಧಿಯಲ್ಲಿ ಗೋಚರವಾಗಲೇಬೇಕು. ಆ ನಿಟ್ಟಿನಲ್ಲಿ ಸರ್ಕಾರ ಕಾರ್ಯಸೂಚಿ ಹಾಕಿಕೊಳ್ಳುತ್ತಿದೆ.
| ಡಾ. ಅಶ್ವತ್ಥನಾರಾಯಣ,ಉನ್ನತ ಶಿಕ್ಷಣ ಸಚಿವ
https://www.vijayavani.net/toilets-liquor-shops-built-atop-demolished-masjid-in-china/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 13 =
Remember me
