ಬೆಂಗಳೂರು:ಕೇಂದ್ರ ಸರ್ಕಾರದ ‘ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯಡಿ ಮನೆ ಸೂರಿನ ಮೇಲೆ ಸೌರ ಫಲಕ ಅಳವಡಿಸಿಕೊಳ್ಳಲು ರಾಜ್ಯದಲ್ಲಿ 10 ಸಾವಿರ ಜನ ಆಸಕ್ತಿವಹಿಸಿ, ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮಾಹಿತಿ ನೀಡಿದರು.
ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದದ ಇಂಧನ ಸಚಿವಾಲಯದ ’ಸೂರ್ಯ ರಥ ಯಾತ್ರೆ’ಗೆ ಶನಿವಾರ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಗೃಹ ಬಳಕೆ ಸೌರ ಫಲಕ ಅಳವಡಿಸುವುದಕ್ಕೆ ಮಾತ್ರ ನೆರವು ನೀಡುವುದು ಸೂರ್ಯಘರ್ ಯೋಜನೆ ಉದ್ದೇಶವಾಗಿದೆ ಎಂದರು.
ದೇಶದಲ್ಲಿ ಒಂದು ಕೋಟಿ ಮನೆಗಳ ಛಾವಣಿ ಮೇಲೆ ಸೋಲಾರ್ ಫಲಕ ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವುದು ಯೋಜನೆ ಗುರಿಯಾಗಿದೆ. ಈ ಬಗ್ಗೆ ವ್ಯಾಪಕ ಪ್ರಚಾರ, ಜನರಿಗೆ ಪ್ರೋತ್ಸಾಹಿಸಲೆಂದು ಸೂರ್ಯರಥ ಯಾತ್ರೆಯನ್ನು ಇಲಾಖೆ ಹಮ್ಮಿಕೊಂಡಿದೆ ಎಂದು ಹೇಳಿದರು.
ಕೇಂದ್ರದ ಯೋಜನೆ ಪ್ರಯೋಜನವನ್ನು ರಾಜ್ಯದ ಜನರು ಹೆಚ್ಚೆಚ್ಚು ಪಡೆಯಲು ಇಂಧನ ಸಚಿವ ಕೆ.ಜೆ.ಜಾರ್ಜ್ ಒತ್ತಾಸೆ ನೀಡಿದ್ದಾರೆ. ಸೂರಿನ ಮೇಲೆ ಸೌರ ಲಕ ಅಳವಡಿಕೆಗೆ ಆಸಕ್ತ ಗೃಹ ಬಳಕೆದಾರರು ಕೇಂದ್ರ ಸರ್ಕಾರ (pmsuryaghar.gov.in)ದ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಯೋಜನೆ ಅನುಷ್ಠಾನಕ್ಕೆ ರಾಜ್ಯದಲ್ಲಿ 229 ಖಾಸಗಿ ಪೂರೈಕೆದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಗೌರವ್ ಗುಪ್ತಾ ವಿವರಿಸಿದರು.
ಮನೆ ಛಾವಣಿ ಮೇಲೆ ಒಂದು ಕಿಲೋ ವಾಟ್ ಸಾಮರ್ಥ್ಯದ ವ್ಯವಸ್ಥೆಗೆ 30 ಸಾವಿರ ರೂ., ಎರಡು ಕಿ. ವಾ.ಗೆ 60 ಸಾವಿರ ರೂ. ಸಬ್ಸಿಡಿ ನಿಗದಿಪಡಿಸಲಾಗಿದೆ. ಮೂರು ಕಿ.ವಾ. ಮೇಲ್ಪಟ್ಟ ವ್ಯವಸ್ಥೆಗೆ ಗರಿಷ್ಠ 78 ಸಾವಿರ ರೂ. ಸಬ್ಸಿಡಿ ಮಿತಿಯಿದೆ ಎಂದು ತಿಳಿಸಿದರು.
ಸೂರಿನ ಮೇಲೆ ಸೌರ ವ್ಯವಸ್ಥೆಯನ್ನು ಗ್ರಿಡ್ ಜತೆಗೆ ಸಂಪರ್ಕಿಸುವುದರಿಂದ 25 ವರ್ಷಗಳ ಕಾಲ ವಿದ್ಯುತ್ ಬಿಲ್ ಪಾವತಿಸಬೇಕಿಲ್ಲ. ಸೋಲಾರ್ ಫಲಕಕ್ಕೆ ಮನೆಗಳ ಛಾವಣಿ ಜಾಗ ಬಳಸುವ ಕಾರಣ ಹೆಚ್ಚುವರಿ ಜಾಗದ ಅವಶ್ಯಕತೆಯಿಲ್ಲ, ನಿರ್ವಹಣೆ ವೆಚ್ಚ ತೀರಾ ಕಡಿಮೆ. ಉಚಿತವಾಗಿ ವಿದ್ಯುತ್ ಲಭಿಸುತ್ತಿದೆ ಎಂದು ಗೌರವ್ ಗುಪ್ತಾ ಮಾಹಿತಿ ನೀಡಿದರು.
ಕೇಂದ್ರದ ಎಂಎನ್‌ಆರ್‌ಇ ಜಂಟಿ ಕಾರ್ಯದರ್ಶಿ ದಿನೇಶ್ ಜಗದಾಳೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಬೆಸ್ಕಾಂ ನಿರ್ದೇಶಕ (ಹಣಕಾಸು) ಜೆ.ದರ್ಶನ್ ಇದ್ದರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
