ಬೆಂಗಳೂರು:ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಸಲುವಾಗಿ ಹೆಚ್ಚುವರಿ ಅನುದಾನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ‘ವಿಜಯವಾಣಿ’ಯಲ್ಲಿ ಬುಧವಾರ ‘ಹಳ್ಳಿಗಳಲ್ಲಿ ನೀರಡಿಕೆ’ ಶೀರ್ಷಿಕೆಯಡಿ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಸರ್ಕಾರ, ಶೀಘ್ರದಲ್ಲಿಯೇ 100 ಕೋಟಿ ರೂ. ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಲಿದೆ. ಎರಡನೇ ಹಂತದಲ್ಲಿ ಇನ್ನಷ್ಟು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಚಿವಾಲಯದ ಮೂಲಗಳು ತಿಳಿಸಿವೆ.
ಕುಡಿಯುವ ನೀರಿಗೆ ಅಗತ್ಯವಿರುವ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕೂಡಲೆ ಪ್ರಸ್ತಾವನೆ ಸಲ್ಲಿಸುವಂತೆಯೂ, ಅದರಲ್ಲಿ ಮೊದಲ, 2ನೇ ಹಂತದಲ್ಲಿ ಎಷ್ಟೆಷ್ಟು ಹಣ ಅಗತ್ಯವಿದೆ ಎನ್ನುವುದನ್ನು ವಿವರಗಳೊಂದಿಗೆ ಕಳುಹಿಸಿ ಕೊಡುವಂತೆಯೂ ನಿರ್ದೇಶನ ನೀಡಲಾಗಿದೆ. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ವಿಳಂಬ ನೀತಿ ಅನುಸರಿಸಕೂಡದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿರುವ ಸಿಎಂ ಯಡಿಯೂರಪ್ಪ, ಈ ಬಗ್ಗೆ ಯಾವುದೇ ಪ್ರಸ್ತಾವನೆ ಬಂದರೆ ತಕ್ಷಣವೇ ಗಮನಕ್ಕೆ ತಂದು ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ ಎಂದು ಸಿಎಂ ಸಚಿವಾಲಯ ತಿಳಿಸಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಕಾರ್ಯೋನ್ಮುಖರಾಗಿದ್ದಾರೆ ಎನ್ನಲಾಗಿದೆ.
ದುಡ್ಡಿನ ಸಮಸ್ಯೆ ಆಗಲು ಬಿಡಲ್ಲ:ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆ ನೀಗಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ನೀರಿನ ವಿಷಯದಲ್ಲಿ ದುಡ್ಡಿನ ಸಮಸ್ಯೆ ಆಗುವುದಕ್ಕೆ ಬಿಡುವುದಿಲ್ಲ. ಈಗಿರುವ ಅನುದಾನ ಮೊದಲು ಬಳಸಿ, ಕೂಡಲೆ ಬೇಡಿಕೆಯನ್ನು ಪ್ರಸ್ತಾವನೆ ರೂಪದಲ್ಲಿ ಸಲ್ಲಿಸಿ ಎಂದು ಜಿಪಂಗಳಿಗೆ ತಿಳಿಸಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ವಿಜಯವಾಣಿಯಲ್ಲಿ ಪ್ರಕಟವಾದ ವರದಿ ಗಮನಿಸಿದ್ದೇನೆ. ಈಗಾಗಲೆ ಎಲ್ಲ ಜಿಪಂಗಳಿಗೂ ಸೂಚನೆ ನೀಡಲಾಗಿದ್ದು, ಸಮರೋಪಾದಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಸರ್ಕಾರ ನೀಡಿದ್ದ -ಠಿ;68 ಕೋಟಿ ಅನುದಾನದಲ್ಲಿ 3 ಬಾರಿ ಬರ ಘೋಷಣೆ ಆಗಿರುವ ತಾಲೂಕುಗಳಿಗೆ -ಠಿ;50 ಲಕ್ಷ, 2 ಬಾರಿ ಘೋಷಣೆ ಆಗಿದ್ದ ತಾಲೂಕಿಗೆ -ಠಿ;35 ಲಕ್ಷ, 1 ಬಾರಿ ಘೋಷಣೆ ಮಾಡಿದ್ದಕ್ಕೆ -ಠಿ;25 ಲಕ್ಷ, ಇನ್ನುಳಿದಂತೆ ಎಲ್ಲ ಜಿಪಂಗೆ ತಲಾ -ಠಿ;15 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ನೀರಿನ ತೀವ್ರ ಸಮಸ್ಯೆ ಇರುವ ಗ್ರಾಪಂಗಳಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 15 =
Remember me
