|ಮರಿದೇವ ಹೂಗಾರಹಾವೇರಿ
ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿಯಲ್ಲಿ ವಿಜೃಂಭಣೆಯಿಂದ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಮುಖ ನಿರ್ಣಯಗಳ ಆಗ್ರಹಕ್ಕೆ ಸಮಾರೋಪ ಸಮಾರಂಭದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸುವುದರೊಂದಿಗೆ ನುಡಿಜಾತ್ರೆ ಯಶಸ್ವಿಯಾಗಿ ಸಂಪನ್ನಗೊಂಡಿತು.
ಕನ್ನಡ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ ಪಡೆಯುವುದು, ಗಡಿ ಅಭಿವೃದ್ಧಿಗೆ 100 ಕೋಟಿ ರೂ. ನೀಡುವುದು, ಶಾಸ್ತ್ರೀಯ ಸ್ಥಾನಮಾನ ಅನುಷ್ಠಾನ ಮಾರ್ಗದರ್ಶನಕ್ಕೆ ಹಿರಿಯ ಸಾಹಿತಿಗಳ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದರು. ಇದಕ್ಕೂ ಮುನ್ನ ಸಮ್ಮೇಳನದ ವೇದಿಕೆಯಲ್ಲಿ ಈ ವಿಷಯವಾಗಿ ನಿರ್ಣಯ ಕೈಗೊಳ್ಳಲಾಗಿತ್ತು. ತಕ್ಷಣವೇ ಸ್ಪಂದಿಸಿದ ಸಿಎಂ, ಸರ್ಕಾರದ ಮುಂದಿನ ನಡೆಯನ್ನು ವೇದಿಕೆಯಲ್ಲೇ ಘೋಷಿಸಿ, ಕನ್ನಡ ಮನಸುಗಳನ್ನು ಸಂತೈಸಿದರು. ಅಷ್ಟೇ ಅಲ್ಲದೇ ಕನ್ನಡ ಅಸ್ಮಿತೆ ಉಳಿಸಲು ಸರ್ಕಾರವು ಸದಾ ಬದ್ಧ ಎಂಬ ಸಂದೇಶವನ್ನು ರವಾನಿಸಿದರು. ಗಡಿನಾಡು ಮತ್ತು ಗಡಿಯಾಚೆ ಕನ್ನಡಿಗರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಹಲವು ಯೋಜನೆಗಳು ಜಾರಿಯಲ್ಲಿವೆ. ಅಲ್ಲಿನ ಶಾಲೆ, ಕನ್ನಡ ಕೇಂದ್ರಗಳ ಅಭಿವೃದ್ಧಿಗೆ 25 ಕೋಟಿ ರೂ. ಕೊಟ್ಟಿದ್ದೇವೆ. ಆ ಭಾಗದ ಜನರ ಆರೋಗ್ಯ, ಶಿಕ್ಷಣ ಅಭಿವೃದ್ಧಿಗೆ ಈ ವರ್ಷ 100 ಕೋಟಿ ರೂ. ಕೊಡಲಾಗುವುದು ಎಂದು ಸಿಎಂ ಪ್ರಕಟಿಸಿದರು. ವಲಸಿಗರು ಕನ್ನಡ ಕಲಿಯಲು ಕನ್ನಡ ಕಲಿಸುವ ಅಭಿಯಾನ ಶುರು ಮಾಡುತ್ತೇವೆ. ಕನ್ನಡ ಹೋರಾಟಗಾರರ ಮೇಲಿರುವ ಕಾಗ್ನಿಜೆನ್ಸ್ ಪ್ರಕರಣ ಹೊರತುಪಡಿಸಿ ಉಳಿದ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ತಿಳಿಸಿದರು.
ಮಂಡ್ಯದಲ್ಲಿ ಮುಂದಿನ ಸಮ್ಮೇಳನ:87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ಸಕ್ಕರೆ ನಾಡು ಮಂಡ್ಯಕ್ಕೆ ದೊರೆತಿದೆ. ಹಾವೇರಿ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎರಡು ತಾಸಿನ ಚರ್ಚೆಯ ಬಳಿಕ, ಗೌಪ್ಯ ಮತದಾನದ ಮೂಲಕ ಮಂಡ್ಯ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ ಜೋಶಿ ಘೋಷಿಸಿದರು. ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಮಗಳೂರು, ಉತ್ತರಕನ್ನಡ, ರಾಮನಗರ, ಬಳ್ಳಾರಿ, ಬೆಳಗಾವಿ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಸಮಿತಿಗಳು ಮುಂದಿನ ಆತಿಥ್ಯಕ್ಕೆ ಕೋರಿಕೆ ಸಲ್ಲಿಸಿದ್ದವು.
ಸಮಾರೋಪಕ್ಕೆ ಮುನ್ನ ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥಪಡಿಸುವುದು, ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೇಯಕವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು, ಹಿಂದಿ ಭಾಷೆ ಹೇರಿಕೆಯನ್ನು ಖಂಡಿಸುವುದು, ವಿಶ್ವಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸುವುದು ಸೇರಿ ಆರು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕಸಾಪ ಗೌರವ ಅಧ್ಯಕ್ಷ ಬಿ.ಎಂ. ಪಟೇಲಪಾಂಡು ಸರ್ವಾನುಮತದಿಂದ ಕೈಗೊಂಡ ನಿರ್ಣಯಗಳನ್ನು ಮಂಡಿಸಿದರು, ಬಹಿರಂಗ ಅಧಿವೇಶನ ಅನುಮೋದಿಸಿತು.

ಡಾ.ಬ್ರೋ ಯಾವಾಗ ವಿದೇಶಕ್ಕೆ ಹೋಗಲ್ಲ?; ಒಂದು ದೇಶಕ್ಕೆ ಹೊರಟಾಗ ಅವರ ಅಧ್ಯಯನ ಹೇಗಿರುತ್ತೆ?; ಇಲ್ಲಿದೆ ಮಾಹಿತಿ..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − six =
Remember me
