ಬೆಂಗಳೂರು:ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ರೈತರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ 105 ಕೋಟಿ ರೂ. ಬಿಡುಗಡೆ ಮಾಡಿದ್ದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅದನ್ನು ಕಟುವಾಗಿ ಟೀಕಿಸಿದ್ದಾರೆ.
ತಮ್ಮ ಸರ್ಕಾರದ ಅವಧಿಯಲ್ಲಿ ಮಾರ್ಗಸೂಚಿ ದರಕ್ಕಿಂತ ಹೆಚ್ಚು ಪರಿಹಾರ ಬಿಡುಗಡೆ ಮಾಡಿದ್ದನ್ನು ಅಂಕಿ-ಅಂಶ ಸಮೇತ ವಿವರಿಸುವ ಮೂಲಕ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರೆ, ರಾಜ್ಯದ ರೈತರಿಗೆ ಬರ ಪರಿಹಾರವಾಗಿ ಕೇವಲ 105 ಕೋಟಿ ರೂ. ಬಿಡುಗಡೆ ಮಾಡಲು ರಾಜ್ಯದ ರೈತರನ್ನು ಆರು ತಿಂಗಳು ಸತಾಯಿಸಬೇಕಿತ್ತಾ? 123 ತಾಲೂಕುಗಳು ಬರ ಪೀಡಿತ ಎಂದು ನೀವೇ ಘೋಷಣೆ ಮಾಡಿದ್ದು, ಅಷ್ಟು ದೊಡ್ಡ ಮಟ್ಟದ ಬರಕ್ಕೆ ಪ್ರತಿ ಹೆಕ್ಟೇರ್‌ಗೆ ಕೇವಲ 2000 ರೂ. ನೀಡುತ್ತಿರುವುದೇಕೆ? ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರ ಕೇಂದ್ರ ಬರ ನಿರ್ವಹಣೆಗಾಗಿ ಎನ್‌ಡಿಆರ್‌ಎ್ ಅನುದಾನ ನಿರೀಕ್ಷಿಸಿ, ಕೇಂದ್ರ ಸರ್ಕಾರ ಹೊರಡಿಸಿರುವ ಎಸ್‌ಡಿಆರ್‌ಎ್ ಮಾರ್ಗಸೂಚಿ ಅನ್ವಯ ಅರ್ಹ ರೈತರಿಗೆ ಬರ ಪರಿಸ್ಥಿತಿಯಿಂದ ಶೇ.33 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 2 ಹೆಕ್ಟೇರ್‌ಗೆ ಸೀಮಿತಗೊಳಿಸಿ ಇನ್‌ಪುಟ್ ಸಬ್ಸಿಡಿ ನಿಗದಿಪಡಿಸಲಾಗಿದೆ.
ಮಳೆಯಾಶ್ರಿತ ಬೆಳೆ (ಪ್ರತಿ ಹೆಕ್ಟೇರ್) 8,500 ರೂ., ನೀರಾವರಿ ಬೆಳೆ 17,000 ರೂ., ಹಾಗೂ ಬಹು ವಾರ್ಷಿಕ ಬೆಳೆ 22,500 ರೂ. ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಎನ್‌ಡಿಆರ್‌ಎ್ ಅಡಿ ಈವರೆಗೂ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಸದ್ಯಕ್ಕೆ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಪ್ರತಿ ರೈತರಿಗೆ ಗರಿಷ್ಠ 2 ಸಾವಿರ ರೂ. ವರೆಗೆ ಪಾವತಿ ಮಾಡಲು ರಾಜ್ಯ ಸರ್ಕಾರ 105 ಕೋಟಿ ರೂ.ಗಳನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಬಿಡುಗಡೆ ಮಾಡಿದೆ.
ಮುಂದಿನ ದಿನಗಳಲ್ಲಿ ಎನ್‌ಡಿಆರ್‌ಎ್ ಅನುದಾನ ಬಿಡುಗಡೆಯಾದ ನಂತರ ಎಸ್‌ಡಿಆಎ್ ಮಾರ್ಗಸೂಚಿ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆ ಇರುವ ರೈತರಿಗೆ ಹೆಚ್ಚುವರಿ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡುವುದಾಗಿಯೂ ಸರ್ಕಾರ ಹೇಳಿದೆ.
ರೈತರ ಖಾತೆಗಳಿಗೆ ಆಧಾರ ಲಿಂಕ್ ಆಗಿರುವ ಸತ್ಯ ಹೊರಬರುತ್ತಿದ್ದಂತೆ, ತಕ್ಷಣ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ಆದೇಶ ಮಾಡಿದ್ದು, ನೀವು ರಾಜಕಾರಣಕ್ಕಾಗಿ ವಿಳಂಬ ಧೋರಣೆ ಅನುಸರಿಸಲು ಆಧಾರ್ ಲಿಂಕ್ ಮಾಡುವ ಸುಳ್ಳು ಕಥೆ ಹೇಳಿದ್ದೀರಿ ಎನ್ನುವುದು ನಿಮ್ಮ ನಡೆಯಿಂದ ಸ್ಪಷ್ಟವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ 69 ಲಕ್ಷ ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿರುವ ಮಾಹಿತಿ ಸರ್ಕಾರದ ಬಳಿ ಇದ್ದರೂ ಸುಳ್ಳು ಹೇಳಿ ಜನರ ದಾರಿ ತಪ್ಪಿಸಿದ ಉದ್ದೇಶವೇನು? ನಮ್ಮ ಅವಧಿಯಲ್ಲಿ 2022-23 ನೇ ಸಾಲಿನಲ್ಲಿ ಪ್ರವಾಹದಿಂದ 13.09 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾದ ಬೆಳೆಗೆ 14.63 ಲಕ್ಷ ರೈತರ ಖಾತೆಗೆ ನೇರವಾಗಿ 2,031 ಕೋಟಿ ರೂ.ಗಳನ್ನು 2 ತಿಂಗಳೊಳಗೆ ಜಮೆ ಮಾಡಲಾಗಿತ್ತು.
ನಮ್ಮ ಅವಧಿಯಲ್ಲಿ ಪ್ರವಾಹದಿಂದ ಬೆಳೆ ಹಾನಿಯಾಗಿದ್ದಾಗ ಕೇಂದ್ರ ಸರ್ಕಾರದ ಅನುದಾನಕ್ಕಾಗಿ ಕಾಯದೇ ರಾಜ್ಯ ಸರ್ಕಾರವೇ ಎಸ್‌ಡಿಆರ್‌ಎ್ ಮಾರ್ಗಸೂಚಿ ದರಕ್ಕಿಂತಲೂ ಎರಡು ಪಟ್ಟು ಹೆಚ್ಚಳ ಮಾಡಿ ಮಳೆಯಾಶ್ರಿತ ಪ್ರದೇಶದ ಬೆಳೆ ಹಾನಿಗೆ ಎಸ್‌ಡಿಆರ್‌ಎ್ ದರ 6,800 ಇದ್ದರೆ, ನಮ್ಮ ಸರ್ಕಾರ 13,600 ರೂ.ಗಳನ್ನು ಪರಿಹಾರ ನೀಡಿದ್ದೆವು. ನೀರಾವರಿ ಜಮೀನಿಗೆ ಎಸ್‌ಡಿಆರ್‌ಎ್ ಮಾರ್ಗಸೂಚಿ ದರ 13,500 ಇದ್ದರೆ, ನಮ್ಮ ಸರ್ಕಾರದಿಂದ 25000 ರೂ. ಪರಿಹಾರ ನೀಡಿದ್ದೆವು. ತೋಟಗಾರಿಕಾ ಬೆಳೆ ಹಾನಿಗೆ ಎಸ್‌ಡಿಆರ್‌ಎ್ ಮಾರ್ಗಸೂಚಿ ದರ 18,000 ರೂ. ಇದ್ದರೆ, ನಾವು 28,000 ರೂ. ಪರಿಹಾರ ನೀಡಿದ್ದೆವು ಎಂದು ತಿರುಗೇಟು ನೀಡಿದ್ದಾರೆ.ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಕನಿಷ್ಟ 50,000 ದಿಂದ 5 ಲಕ್ಷದ ವರೆಗೆ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡಿದ್ದೆವು. ಇದು ಎಸ್‌ಡಿಆರ್‌ಎ್, ಎನ್‌ಡಿಆರ್‌ಎ್ ಮಾರ್ಗಸೂಚಿ ದರಕ್ಕಿಂತ ಹೆಚ್ಚು. ಪ್ರವಾಹದಿಂದ ಬಾಧಿತರಾದ ಸಂತ್ರಸ್ತರ ನೆರವಿಗೆ ಪರಿಷ್ಕೃತ ದರದಂತೆ ರಾಜ್ಯ ಸರ್ಕಾರ 3,326 ಕೋಟಿ ರೂ. ವೆಚ್ಚ ಮಾಡಿತ್ತು. ಅಲ್ಲದೇ ಮೂಲ ಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಬಿಡುಗಡೆ ಮಾಡಿದ್ದೆವು. ರಾಜ್ಯದ ಜನರ ಸಂಕಷ್ಟದ ಬಗ್ಗೆ ಕಾಳಜಿ ಇರುವ ಯಾವ ಮುಖ್ಯಮಂತ್ರಿಯೂ ತನ್ನ ತಪ್ಪು ಮುಚ್ಚಿಕೊಳ್ಳಲು ಬೇರೆಯವರ ಕಡೆಗೆ ಬೆರಳು ತೋರಿಸುವುದಿಲ್ಲ. ತಮ್ಮ ಗ್ಯಾರಂಟಿ ಯೋಜನೆಗಳೂ ಅಸಮರ್ಪಕವಾಗಿದ್ದು, ನಿಜವಾದ ಫಲಾನುಭವಿಗಳಿಗೆ ತಲುಪಿಸದೇ ತಾಂತ್ರಿಕ ತೊಂದರೆಯ ಕಾರಣ ಹೇಳುತ್ತಿದ್ದೀರಿ.
ಜಿಲ್ಲಾಧಿಕಾರಿಗಳ ಖಾತೆಗಳಲ್ಲಿ ಹಣ ಇದ್ದರೂ ಅದನ್ನು ಬಿಡುಗಡೆ ಮಾಡದೆ ಕೇವಲ 105 ಕೋಟಿ ಬಿಡುಗಡೆ ಮಾಡಿ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದೀರಿ. ರಾಜ್ಯದ ರೈತರ ಬಗ್ಗೆ ನಿಮಗೆ ಕಳಕಳಿ ಇದ್ದರೆ ಕೇಂದ್ರದ ಅನುದಾನದ ನೆಪ ಹೇಳದೇ ಕೂಡಲೇ ಸಂಪೂರ್ಣ ಬೆಳೆ ಪರಿಹಾರ ಬಿಡುಗಡೆ ಮಾಡಿ. ಇಲ್ಲದಿದ್ದರೆ ಸಂಕಷ್ಟಕ್ಕೆ ಬಾರದ ನಿಷ್ಪ್ರಯೋಜಕ ಸರ್ಕಾರ ನಿಮ್ಮದು ಎಂದು ರಾಜ್ಯದ ರೈತರು ಶಾಪ ಹಾಕುವುದು ನಿಶ್ಚಿತ ಎಂದು ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 20 =
Remember me
