ಬೆಂಗಳೂರು: ಕರೊನಾ ಸಂಕಷ್ಟ ಹಾಗೂ ಲಾಕ್​ಡೌನ್ ಕಾರಣಗಳಿಂದಾಗಿ ವಿದೇಶಗಳು ಹಾಗೂ ವಿವಿಧ ರಾಜ್ಯಗಳಲ್ಲಿ ಸಿಕ್ಕಿಬಿದ್ದಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ.
ಕೇಂದ್ರ ಸರ್ಕಾರ ವಿದೇಶಗಳಲ್ಲಿರುವ ಭಾರತೀಯರನ್ನು ವಾಪಸ್ ಕರೆಸಿಕೊಳ್ಳುವ ಸಂಬಂಧ ಪ್ಲಾನ್ ಆಫ್ ಆಕ್ಷನ್ ತಯಾರು ಮಾಡುತ್ತಿದೆ. ಒಟ್ಟಾರೆ ಕರ್ನಾಟಕದ 10823 ಜನರನ್ನು ಕರೆತರಲು ಉದ್ದೇಶಿಸಲಾಗಿದ್ದು, ಈ ಪೈಕಿ 6100 ಕನ್ನಡಿಗರನ್ನು ಮೊದಲ ಹಂತದಲ್ಲಿ ಕರೆತರಲಾಗುತ್ತಿದೆ. ಈಗಾಗಲೇ ಗುಜರಾತ್​ನಲ್ಲಿರುವ ಕನ್ನಡಿಗರನ್ನು ಕರೆ ತರಲು ಪ್ರಯತ್ನ ಆರಂಭವಾಗಿದೆ.
ಇನ್ನು ಹೊರಗಿನಿಂದ ಕರೆತರುವವರನ್ನು ಪರೀಕ್ಷೆಗೊಳಪಡಿಸಲಾಗುತ್ತದೆ. ಬಳಿಕ ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿ ಅವರಿಗೆ ಚಿಕಿತ್ಸೆ ಅಗತ್ಯವಿದ್ದರೆ ನೀಡಲಾಗುತ್ತದೆ ಹಾಗೂ ಕ್ವಾರಂಟೈನ್ ಮಾಡಲಾಗುತ್ತದೆ. ಲಾಕ್​ಡೌನ್​ನಿಂದಾಗಿ ಬೆಂಗಳೂರು ಸೇರಿ ರಾಜ್ಯದ ಇನ್ನಿತರ ನಗರಗಳಲ್ಲಿ ಸಿಲುಕಿದ್ದ 3 ಸಾವಿರ ವಿದೇಶಿಗರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 22 ವಿಶೇಷ ವಿಮಾನಗಳ ಮೂಲಕ ಅವರವರ ರಾಷ್ಟ್ರಕ್ಕೆ ಕಳುಹಿಸಲಾಗಿದೆ.
ಅಮ್ಮ ಸತ್ತ ನಾಲ್ಕೇ ದಿನಕ್ಕೆ ಮಗನೂ ಇಲ್ಲ … ಸಾವಿನಲ್ಲೂ ತಾಯಿಯನ್ನು ಹಿಂಬಾಲಿಸಿದ ಇರ್ಫಾನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
