ಬೆಂಗಳೂರು :ಕರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ಫ್ಯೂ ಜಾರಿ ಮಾಡಿರುವುದರಿಂದ ಶಿಕ್ಷಣ ಇಲಾಖೆಯು ಕೆಲವು ನಿಯಮಗಳನ್ನು ಬದಲು ಮಾಡಿದೆ. ಆ ಪ್ರಕಾರವಾಗಿ ಮೇ 4 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ರದ್ದು ಮಾಡಿ ಆನ್‍ಲೈನ್‍ನಲ್ಲಿ ಶಿಕ್ಷಣ ನೀಡಲು ಸೂಚಿಸಲಾಗಿದೆ.
ಇನ್ನು 1 ರಿಂದ 9ನೇ ತರಗತಿವರೆಗೆ ಮೌಲ್ಯಾಂಕನವನ್ನು ಏ.30ರೊಳಗೆ ನಿರ್ವಹಿಸಿ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಇದನ್ನು ಮಾರ್ಪಾಡು ಮಾಡಿರುವ ಶಿಕ್ಷಣ ಇಲಾಖೆ, ಏ.26ರೊಳಗೆಯೇ ಪೂರ್ಣಗೊಳಿಸುವಂತೆ ಸೂಚಿಸಿದೆ. ಉಳಿದ ಎಲ್ಲ ಶಿಕ್ಷಕರಿಗೂ ಮೇ 4 ರವರೆಗೆ ಶಾಲೆಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಿದೆ.
ಇದನ್ನೂ ಓದಿ:ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಚಿತ್ರ ಅಳವಡಿಕೆ: ಸಾಫ್ಟ್‌ವೇರ್ ಇಂಜಿನಿಯರ್ ಬಂಧನ
ಈ ಸಮಯದಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ವಿಷಯಕ್ಕೆ ಸಂಬಂಧಿಸಿದಂತೆ ಆನ್‍ಲೈನ್ ಮತ್ತು ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು, ವಿದ್ಯಾರ್ಥಿಗಳಿಗೆ ಕಷ್ಟ ಎನಿಸುವ ಅಂಶಗಳನ್ನು ಸುಲಭ ವಿಧಾನದಲ್ಲಿ ತಿಳಿಸಿಕೊಡುವಂತೆ ಶಿಕ್ಷಕರಿಗೆ ಸೂಚಿಸಿದೆ.
ಈ ಸುತ್ತೋಲೆ ತಾತ್ಕಾಲಿಕವಾಗಿದ್ದು, ಕರೊನಾ ಹಿನ್ನೆಲೆಯಲ್ಲಿ ಕಾಲಕಾಲಕ್ಕೆ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ, ಶಿಕ್ಷಕರಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕರೊನಾ : 23,558 ಹೊಸ ಪ್ರಕರಣಗಳು; 116 ಸಾವು

ದೇವಸ್ಥಾನದಲ್ಲಿ ಸಿಕ್ಕಿತು ಪೂಜಾರಿಗಳ ತಲೆ ಕಡಿದ ದೇಹ ! ಬೆಚ್ಚಿಬೀಳಿಸುತ್ತೆ ಈ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − five =
Remember me
