ಬೆಂಗಳೂರು:ನ್ಯಾಯಾಲಯದ ಆದೇಶದ ಹೊರತಾಗಿಯೂ ರಾಜ್ಯಾದ್ಯಂತ 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಸಂಬಂಧ ಎಫ್​ಐಆರ್ ದಾಖಲಿಸಿ ತನಿಖೆ ನಡೆಸದ ಪೊಲೀಸರ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನೇ ಕಟಕಟೆಗೆ ಕರೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಬಾಲನ್ಯಾಯ (ಮಕ್ಕಳ ಆರೈಕೆ ಹಾಗೂ ಸುರಕ್ಷತೆ) ಕಾಯ್ದೆಯ ಸಮರ್ಪಕ ಅನುಷ್ಠಾನ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಬಚ್ಪನ್ ಬಚಾವೋ ಸ್ವಯಂ ಸೇವಾ ಸಂಸ್ಥೆ ಪಿಐಎಲ್​ಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಈ ಹಿಂದೆ ತಿಳಿಸಿದ್ದಂತೆ, ರಾಜ್ಯದಲ್ಲಿ ಅಂಥ ಯಾವುದೇ ಪ್ರಕರಣಗಳು ನಡೆದಿಲ್ಲ. ಬಾಲಮಂದಿರದಲ್ಲಿ ಅಂತಹ ಮಕ್ಕಳು ಇದ್ದರೆಂಬ ಯಾವುದೇ ಮಾಹಿತಿ ಇಲ್ಲ ಎಂದು ನ್ಯಾಯಪೀಠಕ್ಕೆ ಸರ್ಕಾರಿ ವಕೀಲರು ತಿಳಿಸಿದರು.
ಅದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪೀಠ, ಪ್ರಕರಣದ ಬಗ್ಗೆ ಎಫ್​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಕೋರ್ಟ್ ಎರಡು-ಮೂರು ಬಾರಿ ಆದೇಶ ನೀಡಿದೆ. ಆದರೆ, ಪೊಲೀಸರು ತನಿಖೆಯನ್ನೇ ನಡೆಸದೆ ಅಂಥ ಪ್ರಕರಣಗಳೇ ನಡೆದಿಲ್ಲ ಎಂದು ಹೇಳಿದರೆ ಒಪ್ಪಲು ಸಾಧ್ಯವಿಲ್ಲ. ತನಿಖೆ ನಡೆಸಲಾಗುವುದಿಲ್ಲ ಎಂದಾದರೆ ಹಿರಿಯ ಅಧಿಕಾರಿಗಳನ್ನೇ ಕೋರ್ಟ್​ಗೆ ಕರೆಸಬೇಕಾಗುತ್ತದೆ ಎಂದು ಕಟುವಾಗಿ ನುಡಿಯಿತು.
ಕೇಂದ್ರ ಸರ್ಕಾರದ ವರದಿಯಲ್ಲಿ 2018ರಲ್ಲಿ ಕರ್ನಾಟಕದಲ್ಲಿ 113 ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆದಿವೆ ಎಂದು ಗಂಭೀರ ಕಳವಳ ವ್ಯಕ್ತವಾಗಿದೆ. ಆದರೆ, ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಆಘಾತಕಾರಿಯಾದೆ. ಈ ಬಗ್ಗೆ ಪೊಲೀಸರೇಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ ಪೀಠ, ಈ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಸರ್ಕಾರಿ ವಕೀಲರಿಗೆ ತಾಕೀತು ಮಾಡಿ, ಜ.13ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.
ಲೋಕಾಯುಕ್ತ ಹಲ್ಲಿಲ್ಲದ ಹಾವಾಗಿದೆ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯಿಂದ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವ ಅಧಿಕಾರವೇ ಇಲ್ಲವಾಗಿದೆ. ಲೋಕಾಯುಕ್ತ ಸಂಸ್ಥೆಯ ಹಲ್ಲು ಕಿತ್ತಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆಯ ಅಧಿಕಾರ ನೀಡದಿದ್ದರೆ ಭ್ರಷ್ಟಾಚಾರ ತಡೆಗಟ್ಟಲು ಸಾಧ್ಯವಿಲ್ಲ ಎಂದು ಲೋಕಾಯುಕ್ತ ಸಂಸ್ಥೆ ಪರ ವಕೀಲರು ಹೈಕೋರ್ಟ್ ಮುಂದೆ ಪ್ರತಿಪಾದಿಸಿದ್ದಾರೆ. ಎಸಿಬಿ ರಚನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಪಿಐಎಲ್​ಗಳು ಹಾಗೂ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಲೋಕಾಯುಕ್ತ ಸಂಸ್ಥೆ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿ, ಲೋಕಾಯುಕ್ತವನ್ನು ಕೇವಲ ವಿಚಾರಣಾ ಆಯೋಗದಂತೆ ಮಾಡಲಾಗಿದ್ದು, ಅದಕ್ಕೆ ತನಿಖೆ ನಡೆಸುವ ಅಧಿಕಾರವೇ ಇಲ್ಲವಾಗಿದೆ. ಹಿಂದಿನ ವ್ಯವಸ್ಥೆಯಲ್ಲಿ ಎಡಿಜಿಪಿ ಸರ್ಕಾರದ ಅಧೀನದಲ್ಲಿರುತ್ತಿರಲಿಲ್ಲ. ಅದರಿಂದ, ನಿಷ್ಪಕ್ಷಪಾತ ತನಿಖೆ ನಡೆಸಲು ಅವಕಾಶವಿತ್ತು. ಆದರೆ ಈಗ ಲೋಕಾಯುಕ್ತ ಸಂಸ್ಥೆ ಹಲ್ಲು ಕಿತ್ತ ಹಾವಿನಂತಾಗಿದೆ. ಕಾನೂನು ಬಾಹಿರವಾಗಿ ಎಸಿಬಿ ರಚನೆ ಮಾಡಲಾಗಿದೆ. ಲೋಕಾಯುಕ್ತ ಸಂಸ್ಥೆಯ ಬಳಿ ಇದ್ದ ತನಿಖೆಯ ಅಧಿಕಾರವನ್ನು ಕಸಿದುಕೊಂಡಿರುವುದರಿಂದಲೇ ಅದು ದುರ್ಬಲವಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ ಪ್ರತಿವಾದ ಆಲಿಸಿದ ಪೀಠ, ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 13 =
Remember me
