ಬೆಂಗಳೂರು:ನಗರದ ವಿದ್ಯಾಪೀಠದ ಸರ್ಕಾರಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನಿಲಯದ 8 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಇವರ ಸಂಪರ್ಕಕ್ಕೆ ಬಂದಿರುವ 158 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ವಿದ್ಯಾಪೀಠದ ಹಾಸ್ಟೆಲ್‌ನಲ್ಲಿ ಐದಕ್ಕಿಂತ ಅಧಿಕ ಜನರಿಗೆ ಸೋಂಕು ಪತ್ತೆಯಾಗುವ ಮೂಲಕ ಇದು ಒಂದು ತಿಂಗಳ ಅವಧಿಯಲ್ಲಿ 11ನೇ ಕ್ಲಸ್ಟರ್ ಮಾದರಿ ಕರೊನಾ ಸೋಂಕಿನ ಪ್ರಕರಣವಾಗಿದೆ.
ಮಾ.8ಕ್ಕೆ ಸರ್ಕಾರಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಸೋಂಕು ದೃಢಪಟ್ಟಿತ್ತು. ನಂತರ ಅವರ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ವೇಳೆ 7 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರನ್ನು ಜಯನಗರದ ಸಂಜಯಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇವರ ಸಂಪರ್ಕಕ್ಕೆ ಬಂದ 158 ವಿದ್ಯಾರ್ಥಿಗಳನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗಿದೆ ಎಂದು ದಕ್ಷಿಣ ವಲಯದ ಜಂಟಿ ಆಯುಕ್ತ ವೀರಭದ್ರಸ್ವಾಮಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
