ಚಿಕ್ಕಬಳ್ಳಾಪುರ:ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 12 ಮಂದಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ನಡೆದಿದೆ.
ಆಂಧ್ರ ಪ್ರದೇಶದಿಂದ ಬೆಂಗಳೂರಿನತ್ತ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಟಾಟಾ ಸುಮೋದಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಟಾಟಾ ಸುಮೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ದಟ್ಟ ಮಂಜು ಆವರಿಸಿದ್ದರಿಂದ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಳೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
