ತುಮಕೂರು:ಶಾಲಾ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಈಗಾಗಲೇ 12 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದ್ದು ಹೆಚ್ಚುವರಿಯಾಗಿ ಇನ್ನು 12 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇದನ್ನೂ ಓದಿ:ತಿಮ್ಮಪ್ಪನಿಗೆ ಭಾರೀ ದೇಣಿಗೆ ನೀಡಿದ ಉದ್ಯಮಿ! ಯಾವ ಕಾರಣಕ್ಕೆ ಅಂತಾ ತಿಳಿದ್ರೆ ಶಹಬ್ಬಾಶ್ ಅಂತೀರಾ
ಜಿಲ್ಲಾ ಪಂಚಾಯ್ತಿಯಲ್ಲಿಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು, ಶಿಕ್ಷಣ ಇಲಾಖೆಯ ಸುಧಾರಣೆಗೆ ಈಗಾಗಲೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೆ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗಿದ್ದು, ಇನ್ನೂ 12 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು ಎಂದರು.
ಪ್ರಸಕ್ತ ಶೈಕ್ಷಣಿಕ ವರ್ಷಾರಂಭಕ್ಕೂ ಮುನ್ನವೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ ಅಲ್ಲದೆ ಅನುದಾನಿತ ಶಾಲೆಗಳಲ್ಲಿ ಐದು ವರ್ಷಗಳಿಂದಲೂ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಅನುಮತಿ ನೀಡಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1008 ಅಂಗನವಾಡಿಗಳಲ್ಲಿ ಎಲ್​ಕೆಜಿ -ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32 ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಚಿವರು ತಿಳಿಸಿದರು.
ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ನಿಟ್ಟನಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರೊಂದಿಗೆ 1500ಕೋಟಿ ವೆಚ್ವದ ಯೋಜನೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ನೀಡಲಾಗುವುದು ಎಂದರು.
ಪೋಷಕರು ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳಿಸಬೇಕು. ಇದರಿಂದ ಸರ್ಕಾರದ ಈ ಯೋಜನೆಗಳು ಸಾರ್ಥಕತೆಪಡೆಯುತ್ತವೆ ಎಂದರು. ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಶಾಲಾ ಶಿಕ್ಷಕರು ವಾರಕ್ಕೊಮ್ಮೆ ವಿಶೇಷ ತರಗತಿ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿ ಕಾರ್ಯ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + nine =
Remember me
