ಬೆಂಗಳೂರು :ರಾಜ್ಯದಲ್ಲಿ ಗುರುವಾರ 229 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,240 ತಲುಪಿದೆ. ಸೋಂಕಿನ ತೀವ್ರತೆಗೆ ನಾಲ್ವರು ಮೃತಪಟ್ಟಿದ್ದು, ಮರಣ ಪ್ರಮಾಣ ದರ ಶೇ. 1.34ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 7,791 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರು ನಗರದಲ್ಲಿ 172 ವರದಿಯಾಗಿವೆ.
ರಾಜ್ಯದಲ್ಲಿ 1,240 ಸೋಂಕಿತರಿದ್ದು, ಇವರಲ್ಲಿ 1,168 ಮಂದಿ ಮನೆ ಆರೈಕೆಯಲ್ಲಿದ್ದಾರೆ. ಉಳಿದ 72 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, 51 ಮಂದಿ ಸಾಮಾನ್ಯವಾರ್ಡ್‌ನಲ್ಲಿ, 9 ಮಂದಿ ಆಕ್ಸಿನ್ ಬೆಡ್, 9 ಮಂದಿ ತುರ್ತು ನಿಗಾ ಘಟಕ ಹಾಗೂ ಮೂವರು ಐಸಿಯು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿನ ತೀವ್ರತೆಯಿಂದ ಬೆಂಗಳೂರಿನಲ್ಲಿ 82 ವರ್ಷದ ಹಾಗೂ 64 ವರ್ಷದ ವೃದ್ಧರಿಬ್ಬರು ಮೃತಪಟ್ಟಿದ್ದಾರೆ. ಇವರಲ್ಲಿ ಒಬ್ಬರು ಕೋವಿಡ್ ಲಸಿಕೆ ಹಾಕಿಸಿಕೊಂಡಿರಲಿಲ್ಲ. ಮೈಸೂರಿನಲ್ಲಿ 60 ವರ್ಷದ ಮಹಿಳೆ ಹಾಗೂ ಧಾರವಾಡದಲ್ಲಿ 63 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
