ಬೆಂಗಳೂರುರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಮಾನ್ಯತೆ ನವೀಕರಣ ಮಾಡಿಕೊಳ್ಳದೇ ಇರುವ 129 ಖಾಸಗಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಡೆಹಿಡಿದಿದೆ.
ಇದರಿಂದ ಇವು ಅನಧಿಕೃತ ಎಂಬುದನ್ನು ಮಂಡಳಿ ಸ್ಪಷ್ಟಪಡಿಸಿದ್ದು, ಅಂತಿಮ ಪ್ರವೇಶ ಪತ್ರ ವಿತರಿಸುವುದಕ್ಕೆ 15 ದಿನಗಳ ಮುಂಚಿತವಾಗಿ ಸಲ್ಲಿಕೆಯಾದಲ್ಲಿ ಆ ಶಾಲೆಗಳ ಕರಡು ಪ್ರವೇಶ ಪತ್ರಗಳನ್ನು ಪರಿಶೀಲನೆಗೆ ಬಿಡುಗಡೆ ಮಾಡಲಾಗುವುದು ಎಂದು ಶಾಲೆಗಳಿಗೆ ಮಂಡಳಿಯ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಮಾನ್ಯತೆ ನವೀಕರಿಸಿಕೊಂಡಿರುವ ಶಾಲೆಗಳ ಪಟ್ಟಿಯನ್ನು ಜಿಲ್ಲಾ ಉಪನಿರ್ದೇಶಕರು ಮಂಡಳಿಗೆ ಕಳುಹಿಸಿಕೊಟ್ಟಿದ್ದಾರೆ. ಇದನ್ನು ಪರಿಶೀಲಿಸಿದಾಗ 129 ಶಾಲೆಗಳು ಮಾನ್ಯತೆ ನವೀಕರಿಸಿದೇ ಇರುವುದು ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಈ 129 ಶಾಲೆಗಳ ಪೈಕಿ ಯಾವುದೇ ಶಾಲೆಗಳು ಮಾನ್ಯತೆ ನವೀಕರಿಸಿಕೊಂಡು ಅದರ ಮಾಹಿತಿಯನ್ನು ಮಂಡಳಿಗೆ ಕಳುಹಿಸಿದಲ್ಲಿ, ಅಂತಹ ಶಾಲೆಗಳ ಕರಡು ಪ್ರವೇಶ ಪತ್ರವನ್ನು ಪರಿಶೀಲನೆಗೆ ಬಿಡುಗಡೆ ಮಾಡುವುದಾಗಿ ಮಂಡಳಿಯು ಶಾಲೆಗಳಿಗೆ ಎಚ್ಚರಿಕೆಯನ್ನು ನೀಡಿದೆ.
129 ಶಾಲೆಗಳ ಪಟ್ಟಿ ಪರಿಶೀಲಿಸಿದಾಗ 36 ಶಾಲೆಗಳು ಬೆಂಗಳೂರು ದಕ್ಷಿಣ ವಿಭಾಗದಲ್ಲಿವೆ. ಬೆಂ.ಉತ್ತರ, ತುಮಕೂರು, ಶಿವಮೊಗ್ಗದ ಜಿಲ್ಲೆಗಳಲ್ಲೂ ಶಾಲೆಗಳಿವೆ. ಮಾನ್ಯತೆ ಪಡೆದುಕೊಳ್ಳದೇ ಇರುವ ಶಾಲೆಗಳು ಅನಧಿಕೃತವಾಗಲಿದ್ದು, ಇಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಸಹ ಅನಧಿಕೃತರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಕರಡು ಪ್ರತಿ ಬಿಡುಗಡೆ ವೇಳೆಯಲ್ಲೇ ಇಂತಹ ಶಾಲೆಗಳಿಗೆ ಮಂಡಳಿಯು ಎಚ್ಚರಿಕೆಯನ್ನು ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 12 =
Remember me
