ಉಡುಪಿ:8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರಿನಲ್ಲಿ ನಡೆದಿದೆ. ಸಾವಲ್ಲೂ ಬಾಲಕಿ ಸಾರ್ಥಕತೆ ಮೆರೆದಿದ್ದಾಳೆ.
ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ(13) ಮೃತಳು. ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು.
ಬುಧವಾರ ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಬಿದಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದಾಳೆ. ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮಗಳ ಸಾವಿನಿಂದ ಕಂಗಾಲದ ಪಾಲಕರು, ನೋವಿನಲ್ಲೂ ಅನುಶ್ರೀಯ ಕಣ್ಣುಗಳನ್ನು ದಾನ ಮಾಡಿ ಇತರರ ಬದುಕಿಗೆ ಬೆಳಕಾಗಿದ್ದಾರೆ. ಗುರುವಾರ ರಾತ್ರಿ ಕುಟುಂಬಸ್ಥರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಿತು.
ದೀಪಾವಳಿ ಹಬ್ಬದಲ್ಲಿ ಗೋಪೂಜೆ ವೇಳೆ ಚಿನ್ನದ ಸರ ನುಂಗಿದ ಆಕಳು!

ಮಹಡಿ ಮೇಲೆ ಒಣ ಹಾಕಿದ್ದ ಬಟ್ಟೆಗೆ ತಾಗಿದ ಪಟಾಕಿ ಕಿಡಿ: ಧಗಧಗಿಸಿದ ಮನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + thirteen =
Remember me
