ವಿಜಯನಗರ:ಚಿಕ್ಕ ಮಕ್ಕಳು ಮನೆಯಲ್ಲಿ ಸುಮ್ಮನೆ ಆಟವಾಡುತ್ತಿದ್ದಾರೆ ಎಂದ ಮಾತ್ರಕ್ಕೆ ಅವರ ಪಾಡಿಗೆ ಅವರನ್ನು ಬಿಟ್ಟುಬಿಡಬೇಡಿ. ಏಕೆಂದರೆ ಇಲ್ಲೊಂದು ಕಡೆ ಆಟವಾಡುತ್ತಿದ್ದ ಗೋಲಿಯೇ ಅದರ ಪ್ರಾಣಕ್ಕೆ ಮುಳುವಾಗಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ತಾಂಡಾದಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ. ಆಟವಾಡುವಾಗ ಗೋಲಿ ‌ನುಂಗಿ ಒಂದು ವರ್ಷ ಎರಡು ತಿಂಗಳ ಮನವೀರ್ ಎಂಬ ಮಗು ಪ್ರಾಣ ಕಳೆದುಕೊಂಡಿದೆ.ಹರೀಶ್​ ಎಂಬವರ ಈ ಮಗು ಮನೆಯಂಗಳದಲ್ಲಿ ಆಟವಾಡುತ್ತ ಗೋಲಿಯನ್ನು ಬಾಯಿಗೆ ಹಾಕಿಕೊಂಡಿದೆ. ಆದರೆ ದುರದೃಷ್ಟವಶಾತ್ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದೆ.
ಇದನ್ನು ಇನ್ನೊಬ್ಬ ಬಾಲಕ ಗಮನಕ್ಕೆ ತಂದಿದ್ದು, ಕೂಡಲೇ ಮಗುವನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಘಟನೆ ನಡೆದ ಹತ್ತು ಹದಿನೈದು ನಿಮಿಷಗಳಲ್ಲೇ ಅಂದರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಮಗು ಉಸಿರುಗಟ್ಟಿ ಕೊನೆಯುಸಿರೆಳೆದಿದೆ. ಕಳೆದ ತಿಂಗಳ ಎರಡನೇ ತಾರೀಕಿನಂದು ಮಗುವಿನ ಮೊದಲ ಜನ್ಮದಿನವನ್ನು ಆಚರಣೆ ಮಾಡಲಾಗಿತ್ತು.
ಮದುವೆಯಾಗಿದ್ದರೂ ಇನ್ನೊಬ್ಬರ ಜತೆ ಪ್ರೇಮ: ಮನೆಬಿಟ್ಟು ಬಂದವರ ಪರಿಸ್ಥಿತಿ ಗಂಭೀರ

ಕೋವಿಡ್​ನಿಂದ ಬಚಾವಾದರೂ ನೆಮ್ಮದಿ ಇಲ್ಲ; ಕಂಡುಬಂದಿದೆ ಮತ್ತೊಂದು ರೋಗ, ಬೋನ್​ ಡೆತ್!

ದೇಶದ ಪ್ರಪ್ರಥಮ ಕೋವಿಡ್​ ಸೋಂಕಿತೆಗೆ ಈಗ ಮತ್ತೆ ಕರೊನಾ!

ನಟ ದರ್ಶನ್​ ಪ್ರಕರಣದಲ್ಲಿ ಟ್ವಿಸ್ಟ್​: ಕೇಳಿ ಬಂತು ಮತ್ತೊಂದು ಹೆಸರು ನಂದಿತಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 12 =
Remember me
