ಮುಂಬೈ:ಅಸ್ವಸ್ಥ ಬಾಲಕನ ಮೈಯಲ್ಲಿ ದೆವ್ವ ಹೊಕ್ಕಿದೆ ಎಂದು ಕುಟುಂಬಸ್ಥರನ್ನು ನಂಬಿಸಿ ಮಂತ್ರಿವಾದಿ ಓರ್ವ ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಕರ್ನಾಟಕದ ಬೆಳಗಾವಿ ಜಿಲ್ಲೆಯ ರಾಯಭಾಗದ ಶಿರ್​ಗೂರಿನಲ್ಲಿ ನಡೆದಿದೆ.
ಆರ್ಯನ್​ ದೀಪಕ್​ ಲಂಡ್ಗೆ(14) ಮೃತ ದುರ್ದೈವಿ ಎಂದು ತಿಳಿದಿ ಬಂದಿದ್ದು ಅಪ್ಪಾ ಸಾಹೇಬ್​ ಕಾಂಬ್ಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಾಜ್​ ತಾಲ್ಲೂಕಿನ ಬಾಲಕ ಆರ್ಯನ್​ ಕಳೆದ ಕೆಲವು ದಿನಗಳಿಂದ ತೀವ್ರ ಜ್ಷರದಿಂದ ಬಳಲುತ್ತಿದ್ದ ವೈದ್ಯರು ಹಾಗೂ ಆಯುರ್ವೇದದ ಔಷಧಿಗಳಿಗೂ ಆತ ಗುಣಮುಖನಾಗಿರಲಿಲ್ಲ.
ಇದೇ ವೇಳೆ ಆರ್ಯನ್​ ಕುಟುಂಬಸ್ಥರಿಗೆ ಸ್ನೇಹಿತರೊಬ್ಬರು ಶಿರಗೂರಿನಲ್ಲಿರುವ ಮಂತ್ರವಾದಿ ಅಪ್ಪಾ ಸಾಹೇಬ್ ಕುರಿತು ಹೇಳಿ ಭೇಟಿ ನೀಡುವಂತೆ ಹೇಳಿದ್ದಾರೆ.
ಸ್ನೇಹಿತನ ಮಾತನ್ನು ನಂಬಿದ ಕುಟುಂಬಸ್ಥರು ಅಸ್ವಸ್ಥ ಆರ್ಯನ್​ನನ್ನು ಕರೆದುಕೊಂಡು ಶಿರಗೂರಿನಲ್ಲಿರುವ ಅಪ್ಪಾ ಸಾಹೇಬ್​ನನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಆರೋಪಿಯೂ ಬಾಲಕನ ಮೈಯಲ್ಲಿ ದೆವ್ವ ಹೊಕ್ಕಿದೆ ಎಂದು ಕುಟುಂಬಸ್ಥರನ್ನು ನಂಬಿಸಿ ಆತನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾನೆ.
ತೀವ್ರವಾಗಿ ಗಾಯಗೊಂಡಿದ್ದ ಅಸ್ವಸ್ಥ ಬಾಲಕನನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಆರ್ಯನ್​ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ವಿಚಾರವನ್ನು ತಿಳಿದ ಅಂಧಶ್ರದ್ಧಾ ನಿರ್ಮೂಲನೆ ಸಮಿತಿ ಸದಸ್ಯರು ಮೃತ ಬಾಲಕಮನ ಕುಟುಂಬಸ್ಥರನ್ನು ಮನವೊಲಿಸಿ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ ಮತ್ತು ಮಂತ್ರವಾದಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
