ಬೆಂಗಳೂರುರಾಜ್ಯದಲ್ಲಿ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮದಲ್ಲಿ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ.
ಈ ಬಾರಿಯ ಬಜೆಟ್‌ನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ತರಗತಿಗಳ ಬೋಧನೆಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು.
ಅದರಂತೆ ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಹಾಲಿ ಪ್ರಾಥಮಿಕ ಶಾಲೆಗಳಲ್ಲಿ ಅಗತ್ಯಾನುಸಾರ ಒಂದನೇ ತರಗತಿಯಿಂದ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷ ಮಾಧ್ಯಮ) ಪ್ರಾರಂಭಿಸಲು ಈ ಹಿಂದೆ ನಿಗದಿಪಡಿಸಿದ ಮಾನದಂಡಗಳಂತೆ ಜಿಲ್ಲೆ, ತಾಲ್ಲೂಕುವಾರು ಪ್ರಸ್ತಾವನೆಗಳನ್ನು ಪಡೆದು ಪರಿಶೀಲಿಸಿ ವರದಿ ಸಲ್ಲಿಸಲು ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಿತ್ತು.
ಅದರಂತೆ ಎಲ್ಲ ಜಿಲ್ಲಾ ಡಿಡಿಪಿಐ ಮತ್ತು ಬಿಇಒಗಳಿಂದ ಪಡೆದ ಪ್ರಸ್ತಾವನೆ ಪರಿಶೀಲಿಸಿ ಒಟ್ಟು 1,419 ಶಾಲೆಗಳಲ್ಲಿ 2024-25ನೇ ಸಾಲಿನಿಂದ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಶಿಫಾರಸು ಮಾಡಿದ್ದರು. ಈ ಶಿಫಾರಸು ಪರಿಶೀಲಿಸಿದ ಸರ್ಕಾರ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಷರತ್ತು ಬದ್ಧ ಅನುಮತಿ ನೀಡಿದೆ.
ಆಯ್ಕೆಯಾಗಿರುವ ಶಾಲೆಗಳ ಪೈಕಿ ಕಲಬುರಗಿ ಪ್ರಾದೇಶಿಕ ವಿಭಾಗದ 872, ಬೆಂಗಳೂರು ವಿಭಾಗದ 297, ಮೈಸೂರು ವಿಭಾಗದ 140 ಮತ್ತು ಧಾರವಾಡ ವಿಭಾಗದ 110 ಶಾಲೆಗಳಿವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − 15 =
Remember me
