ಬೆಂಗಳೂರು:ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದಲ್ಲದೆ, ಭಾರಿ ಸಂಘರ್ಷಕ್ಕೂ ಕಾರಣವಾಗಿದ್ದ ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಮಂಗಳವಾರ ತೀರ್ಪು ಬರಲಿದೆ. ಮತ್ತೊಂದೆಡೆ ಈ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಇರಲಿದೆ.
ಮಾರ್ಚ್ 15ರಿಂದ 21ರ ವರೆಗೆ ಸಿಆರ್‌ಪಿಸಿ 144ರ ಅನ್ವಯ ನಗರದ ಎಲ್ಲೆಡೆ ನಿಷೇಧಾಜ್ಞೆ ವಿಧಿಸಲಾಗಿದೆ. ಒಂದೆಡೆ ಗುಂಪು ಸೇರುವುದು, ಸಭೆ ನಡೆಸುವುದು, ಪ್ರತಿಭಟನೆ, ರ‌್ಯಾಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚಾರಣೆ ನಡೆಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಗಂಡನ ಕತ್ತನ್ನು ಕತ್ತರಿಸಿದ ಹೆಂಡತಿ; ರುಂಡ ಚೀಲದಲ್ಲಿರಿಸಿ ದೇವಸ್ಥಾನದಲ್ಲಿಟ್ಟಳು!
ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರದ ಕುರಿತು ವಿವಾದವಾಗಿ ಎಲ್ಲೆಡೆ ಪ್ರತಿಭಟನೆ, ರ‌್ಯಾಲಿ ಮತ್ತು ಅಹಿತಕರ ಘಟನೆಗಳು ನಡೆದಿದ್ದವು. ಇದೀಗ ವಿವಾದ ಸಂಬಂಧ ಮಂಗಳವಾರ ಹೈಕೋರ್ಟ್ ತೀರ್ಪು ನೀಡಲಿದೆ. ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಗುಪ್ತದಳ ಮಾಹಿತಿ ನೀಡಿದೆ. ಇದರ ಅನ್ವಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಜಾಲತಾಣಗಳ ಮೇಲೆ ನಿಗಾವಹಿಸಿದ್ದು, ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಅಪ್‌ಲೋಡ್ ಮಾಡುವ ಕಿಡಿಗೇಡಿಗಳ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:30 ವರ್ಷಗಳ ಬಳಿಕ ಸಿಕ್ಕಿಬಿದ್ದ ಕೊಲೆ ಆರೋಪಿ; ಮಹಿಳೆಯ ಕುತ್ತಿಗೆಗೆ ಸೀರೆ ಬಿಗಿದು ಕೊಂದಿದ್ದ…
ಹಿಜಾಬ್ ತೀರ್ಪು ಪ್ರಕಣ ಹಿನ್ನೆಲೆಯಲ್ಲಿ ನಾಳೆ ಬೆಳಗಾವಿ ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿಗೊಳಿಸಲಿದ್ದು, ಅದು ಮುಂದಿನ ಆದೇಶದವರೆಗೂ ಜಾರಿ ಇರಲಿದೆ ಎಂಬುದಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಹಿಜಾಬ್ ಸಂಘರ್ಷ ವೇಳೆ ಅತಿಹೆಚ್ಚು ಗಲಾಟೆ ನಡೆದ ಇನ್ನೂ ಕೆಲವು ಜಿಲ್ಲೆಗಳಲ್ಲೂ ನಿಷೇಧಾಜ್ಞೆ ಜಾರಿ ಆಗುವ ಸಾಧ್ಯತೆಗಳಿವೆ.
ಭೀಕರ ಅಪಘಾತ: ತಾಯಿ-ಮಗಳ ಸಾವು, ತಂದೆಯ ಪರಿಸ್ಥಿತಿ ಗಂಭೀರ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − three =
Remember me
