ಬೆಂಗಳೂರು:‘ನವೋದ್ಯಮ ಭಾರತ’ ಸ್ಪರ್ಧೆಯಲ್ಲಿ ಕರ್ನಾಟಕ ಅಗ್ರ ಸ್ಥಾನಿಯಾಗಿ ಹೊರಹೊಮ್ಮಿದ್ದು, ಕೊಡಮಾಡಿದ 36 ಪ್ರಶಸ್ತಿಗಳ ಪೈಕಿ 15 ರಾಜ್ಯದ ಪಾಲಾಗಿವೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಂತಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಮಟ್ಟದ ವಿವಿಧ ವಿಭಾಗಗಳ ಪ್ರಶಸ್ತಿಗಾಗಿ ಕರ್ನಾಟಕದ 418 ನವೋದ್ಯಮಗಳು ಸೇರಿ ದೇಶಾದ್ಯಂತ 1,641 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಸ್ಪರ್ಧೆಯಲ್ಲಿ ರಾಜ್ಯದ 14 ನವೋದ್ಯಮಗಳು, 1 ವೇಗವರ್ಧಕ ಉದ್ಯಮ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿವೆೆ ಎಂದು ಹೇಳಿದ್ದಾರೆ. ಅರಿವು ಕಾರ್ಯಕ್ರಮಗಳನ್ನು ನಡೆಸಿದ ಪ್ರತಿಫಲವಾಗಿ ರಾಜ್ಯದಿಂದ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ. ಸಾಧನೆ ಮೆರೆದ 14 ನವೋದ್ಯಮಗಳ ಪೈಕಿ 11 ನವೋದ್ಯಮ ಕೋಶದಿಂದ ನಡೆಸಲಾಗಿದ್ದ ಎಲಿವೇಟ್/ಐಡಿಯಾ 2ಪಿಒಸಿ ಅನುದಾನಿತ ಕಾರ್ಯಕ್ರಮಗಳಲ್ಲಿ ಗಮನ ಸೆಳೆದು, ಜಯಗಳಿಸಿದ್ದವು ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − ten =
Remember me
