ಬೆಂಗಳೂರು:ಬೆಂಗಳೂರಿನ ಘನತ್ಯಾಜ್ಯ ವಿಲೇವಾರಿ ಕೇಂದ್ರಗಳನ್ನು ನಗರದ ಹೊರಭಾಗದಲ್ಲಿ ಸ್ಥಳಾಂತರ ಮಾಡಲು ಇನ್ನು ಜಾಗವೇ ನಿಗದಿಯಾಗಿಲ್ಲ. ಹೀಗಿರುವಾಗ 30 ವರ್ಷಗಳಿಗೆ ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಗೆ ಗುತ್ತಿಗೆ ನೀಡಲು ಹೇಗೆ ಸಾಧ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.
ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ದುರಂತ: ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಕುಮಾರಸ್ವಾಮಿ
ಕಸ ವಿಲೇವಾರಿ ಟೆಂಡರ್ ನಲ್ಲಿ 15 ಸಾವಿರ ಕೋಟಿ ಲಂಚ ಪಡೆಯಲಾಗಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ನಾವು ಕಸ ವಿಲೇವಾರಿ ಮಾಡುವ ಜಾಗಗಳ ಹುಡುಕಾಟದಲ್ಲಿದ್ದೇವೆ. ಜಾಗ ನಿಗದಿ ಮಾಡಲು ನ್ಯಾಯ ಪಂಚಾಯ್ತಿ ಮಾಡುತ್ತಾ ಒದ್ದಾಡುತ್ತಿದ್ದೇನೆ. ನಾನು ಟೆಂಡರ್ ಕರೆಯದೇ ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಗೆ ಗುತ್ತಿಗೆ ನೀಡಲು ಹೇಗೆ ಸಾಧ್ಯ?. ಈ ವಿಚಾರ ಕೋರ್ಟ್ ನಲ್ಲಿದೆ. ಕಳೆದ ಮೂರು ದಿನಗಳಲ್ಲಿ ಮಂಡೂರಿನಲ್ಲಿ ಕಸ ವಿಲೇವಾರಿ ಪ್ರಕ್ರಿಯೆ ನಿಲ್ಲಿಸಿದ್ದಾರೆ. ಇದಕ್ಕೆ ಪರ್ಯಾಯ ಜಾಗ ಹುಡುಕುತ್ತಿದ್ದು, ನೈಸ್ ರಸ್ತೆ ಬಳಿ ಜಾಗಕ್ಕೆ ನೈಸ್ ಸಂಸ್ಥೆ ಜತೆ ಮಾತನಾಡುತ್ತಿದ್ದೇನೆ ಎಂದರು.
ಇನ್ನೂ ಎರಡು ಮೂರು ಕಡೆ ಇರುವ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನಿಂದ ಹೊರಗೆ ಸ್ಥಳಾಂತರ ಮಾಡಬೇಕಿದೆ. ಈ ಸಮಸ್ಯೆ ಹೇಗೆ ನಿಭಾಯಿಸಬೇಕು ಎಂದು ಕೆಲವು ರಾಜ್ಯಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ, ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡಿ, ನಂತರ ಸದನದ ಮುಂದಿಟ್ಟು ನಂತರ ತೀರ್ಮಾನ ಮಾಡುತ್ತೇವೆ. ಇಷ್ಟು ದಿನ ಕಸದ ವಿಚಾರದಲ್ಲಿ ಟೆಂಡರ್ ಇಲ್ಲದೆ ದಂಧೆ ಮಾಡುತ್ತಿದ್ದವರಿಗೆ ನಮ್ಮ ಈ ಪ್ರಕ್ರಿಯೆ ನೋಡಿ ಹೊಟ್ಟೆ ಉರಿಯುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನ ಯೋಜನೆಗಳ ಬಗ್ಗೆ ಸಿಎಂ ನೇತೃತ್ವದಲ್ಲಿ ಚರ್ಚೆ:ಬೆಂಗಳೂರು ನಗರದ ಅನೇಕ ಯೋಜನೆಗಳ ಬಗ್ಗೆ ಪ್ರಸ್ತಾಪ ಇಟ್ಟಿದ್ದು, ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವ ಮುನ್ನ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ಮಂತ್ರಿಗಳ ಜತೆ ಚರ್ಚೆ ಮಾಡಬೇಕಿದೆ. ಪೆರಿಫೆರಲ್ ರಿಂಗ್ ರಸ್ತೆ, ಘನತ್ಯಾಜ್ಯ ನಿರ್ವಹಣೆ ಯೋಜನೆ, ಮೇಲ್ಸೇತುವೆ, ತೆರಿಗೆ, ಹೊಸ ರಸ್ತೆಗಳ ನಿರ್ಮಾಣ ವಿಚಾರವಾಗಿ ಬ್ರ್ಯಾಂಡ್ ಬೆಂಗಳೂರು ಮೂಲಕ ನಮಗೆ ಬಂದಿರುವ ಸಲಹೆಗಳನ್ನು ಚರ್ಚೆ ಮಾಡಲಾಗುವುದು. ನಾನು ಏಕಾಏಕಿ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಎಲ್ಲರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಬೇಕು ಎಂದರು.
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಬಗ್ಗೆ ಕೇಳಿದಾಗ, “ಎಲ್ಲಾ ಕಡೆ ಮಳೆಯಾಗುತ್ತಿಲ್ಲ. ಕೆಲವು ಕಡೆ ಮಾತ್ರವಾಗುತ್ತಿದೆ. ಸದ್ಯಕ್ಕೆ ತಮಿಳುನಾಡು ಜತೆಗಿನ ನೀರು ಹಂಚಿಕೆ ಪರಿಸ್ಥಿತಿ ಸುಧಾರಣೆಯಾಗುತ್ತಿದೆ” ಎಂದು ತಿಳಿಸಿದರು.
ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯಲು ನಮ್ಮ ಸರ್ಕಾರ ಬದ್ಧ:“ಕರ್ನಾಟಕದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಖಾಸಗಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ವಿಚಾರ ಹಾಗೂ ನಮ್ಮ ಧ್ವಜ, ಭಾಷೆ, ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ ಸೇರಿದಂತೆ ರಾಜ್ಯದಲ್ಲಿ ಮುಂದೆ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಇಂತಿಷ್ಟು ಉದ್ಯೋಗ ಮೀಸಲಿಡುವವರೆಗೂ ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಈ ಬಗ್ಗೆ ನಿಟ್ಟಿನಲ್ಲಿ ಮಸೂದೆ ತಂದಿದೆ” ಎಂದು ಉತ್ತರಿಸಿದರು.
ಉದ್ಯೋಗಗಳ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ:“ತಂತ್ರಜ್ಞಾನ ಉದ್ಯೋಗಗಳ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಈ ವಿಚಾರ ನಮಗೆ ಅರ್ಥವಾಗುತ್ತದೆ. ಇಂತಹ ವಿಚಾರದಲ್ಲಿ ನಾವು ವಿನಾಯಿತಿ ನೀಡುತ್ತೇವೆ. ಈ ಬಗ್ಗೆ ಅವರು ಸರ್ಕಾರದ ಗಮನಕ್ಕೆ ತರಬೇಕು. ಸದನ ನಡೆಯುತ್ತಿರುವ ಸಮಯದಲ್ಲಿ ಮಸೂದೆಯ ಇತರೆ ಮಾಹಿತಿಯನ್ನು ನಾನು ಸದನದ ಹೊರಗೆ ಬಹಿರಂಗ ಪಡಿಸಲು ಆಗುವುದಿಲ್ಲ. ಸದನದಲ್ಲಿ ಎಲ್ಲಾ ಅಂಶಗಳು ಚರ್ಚೆಯಾಗಲಿ” ಎಂದು ತಿಳಿಸಿದರು.
ಪಂಚೆಯುಟ್ಟ ರೈತನಿಗೆ ಜಿ.ಟಿ ಮಾಲ್ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂಬ ಪ್ರಶ್ನೆಗೆ, “ಈ ಬಗ್ಗೆ ನನಗೆ ಮಾಹಿತಿ ಗೊತ್ತಿಲ್ಲ. ಮಾಹಿತಿ ಪಡೆದು ನಂತರ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.
ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ, ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − two =
Remember me
