ಚಾಮರಾಜನಗರ:ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಬ್ಯಾಂಕಾಕ್​ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಬೆನ್ನಿಗೇ ಇನ್ನೊಂದು ಅಂಥದ್ದೇ ಪ್ರಕರಣ ನಡೆದಿದೆ. ಹದಿನೈದು ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವಿಗೀಡಾಗಿದ್ದಾಳೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್‌ನಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ಬೆಂಗಳೂರು ಮೂಲದ ವಿದ್ಯಾರ್ಥಿನಿ ಫೆಲಿಶಾ (15) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾಳೆ. ಈಕೆ ಇಲ್ಲಿನ ಕ್ರೈಸ್ತ ಮಿಷನರಿ ಹಾಸ್ಟೆಲ್​ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು.
ಫೆಲಿಶಾ ಇಂದು ಬೆಳಗ್ಗೆ ವಾಕಿಂಗ್ ಮಾಡುವಾಗ ಕುಸಿದು ಬಿದ್ದಳು. ಕೂಡಲೇ ಆಕೆಯನ್ನು ಸಮೀಪದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಷ್ಟರಲ್ಲಾಗಲೇ ಅಸುನೀಗಿದ್ದಳು. ವಿಷಯ ತಿಳಿದ ಸಾರ್ವಜನಿಕರು ಆಸ್ಪತ್ರೆ ಹಾಗೂ ಶಾಲೆಗೆ ಧಾವಿಸಿ ಫೆಲಿಶಾ ಸಾವಿಗೆ ಮರುಕ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ಆಗಮಿಸಿದ ಆಕೆಯ ತಾಯಿ ಅನಿತಾ ಹಾಗೂ ಸಂಬಂಧಿಕರ ರೋದನ ಮುಗಿಲು ಮುಟ್ಟಿತ್ತು. ತಮ್ಮ ಮಗಳ ಮರಣೋತ್ತರ ಪರೀಕ್ಷೆ ಬೇಡ ನಮ್ಮ ವಶಕ್ಕೆ ಕೊಡಿ ಎಂದು ದುಂಬಾಲು ಬಿದ್ದರು. ವಿದ್ಯಾರ್ಥಿನಿಯ ಸಾವಿನ ಸತ್ಯ ತಿಳಿಯಲು ಮರಣೋತ್ತರ ಪರೀಕ್ಷೆ ಅಗತ್ಯವಾಗಿದೆ ಎಂದು ಸರ್ಕಲ್ ಇನ್​ಸ್ಪೆಕ್ಟರ್​ ಪರಶಿವಮೂರ್ತಿ, ಸಬ್ ಇನ್​​ಸ್ಪೆಕ್ಟರ್​​ ಕಿರಣ್ ಮನವರಿಕೆ ಮಾಡಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
