ಬೆಂಗಳೂರು:ಮುಂದಿನ ಆರು ತಿಂಗಳಲ್ಲಿ 1547 ಸಬ್ ಇನ್​ಸ್ಪೆಕ್ಟರ್ ಹಾಗೂ ಮೂರು ಸಾವಿರ ಕಾನ್​ಸ್ಟೆಬಲ್​ಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ.
ಸುದ್ದಿಗಾರರ ಜತೆ ಮಾಹಿತಿ ಹಂಚಿಕೊಂಡ ಗೃಹ ಸಚಿವ ಜಿ. ಪರಮೇಶ್ವರ, ನ್ಯಾಯಾಲಯದಿಂದ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ 545 ಮಂದಿ ಸಬ್ ಇನ್​ಸ್ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಒಳಗಾಗಿ ಭರ್ತಿ ಮಾಡಲಾಗುವುದು. ಬಳಿಕ 402 ಸಬ್ ಇನ್​ಸ್ಪೆಕ್ಟರ್​ಗಳ ಹುದ್ದೆ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಬಳಿಕ 600 ಪಿಎಸ್​ಐ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುತ್ತದೆ. ಒಟ್ಟಾರೆ 1547 ಪಿಎಸ್​ಐ ಹುದ್ದೆಗಳನ್ನು ಮುಂದಿನ ಆರು ತಿಂಗಳಲ್ಲಿ ಭರ್ತಿ ಮಾಡಲಾಗುವುದು. ಇಲಾಖೆಗೆ ಹದಿನೈದು ಸಾವಿರ ಕಾನ್​ಸ್ಟೆಬಲ್ ಅಗತ್ಯವಿದ್ದು, ಮೊದಲು ಮೂರು ಸಾವಿರ ಕಾನ್​ಸ್ಟೆಬಲ್ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೂ ಆದಷ್ಟು ಶೀಘ್ರವಾಗಿ ಚಾಲನೆ ಕೊಡಲಾಗುತ್ತದೆ ಎಂದು ತಿಳಿಸಿದರು.
ನಿವೃತ್ತ ಪೋಲೀಸ್ ಸಿಬ್ಬಂದಿ ಬದಲಾಗಿ ಹೊಸಬರನ್ನು ನೇಮಕ ಮಾಡಲು ಹಣಕಾಸು ಇಲಾಖೆಯ ಒಪ್ಪಿಗೆ ಬೇಕಿಲ್ಲ ಎಂದು ನಿಯಮ ಇತ್ತು. ಆದರೆ ಬಿಜೆಪಿ ಸರ್ಕಾರ ನಿಯಮ ಬದಲಿಸಿದೆ. ಮುಂದಿನ ದಿನಗಳಲ್ಲಿ ಈ ನಿಯಮವನ್ನು ಬದಲಿಸಿ ಕಾನೂನು ರೂಪಿಸಲಾಗುವುದು. ಇಲಾಖೆಯಲ್ಲಿ ಪ್ರತಿ ವರ್ಷ ವರ್ಗಾವಣೆ ಮಾಡಲಾಗುತ್ತಿದ್ದು, ಇನ್ನು ಮುಂದೆ ಎರಡು ವರ್ಷಗಳ ನಂತರ ವರ್ಗಾವಣೆ ಮಾಡಬೇಕು ಎಂಬ ಕಾನೂನನ್ನು ರೂಪಿಸುವ ಉದ್ದೇಶವಿದೆ ಎಂದು ಹೇಳಿದರು.
ಪಿಎಸ್​ಐ ನೇಮಕಾತಿ ಹಗರಣ: ಡಿ.23ಕ್ಕೆ 545 PSI ಹುದ್ದೆಗಳಿಗೆ ಮರು ಪರೀಕ್ಷೆ

ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಇನ್ನೂ ಕೆಲವೇ ಮೀಟರ್​ಗಳು ಬಾಕಿ: ಸ್ಥಳದಲ್ಲಿವೆ 20 ಆಂಬ್ಯುಲೆನ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
