ಬೆಂಗಳೂರು:ಸಂಪಾದನೆಗೂ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿ ರಾಜ್ಯಾದ್ಯಂತ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ತಹಶೀಲ್ದಾರರೊಬ್ಬರ ಮನೆಯಲ್ಲಿ ಲೀಟರ್​​ಗಟ್ಟಲೆ ಮದ್ಯ ಪತ್ತೆಯಾಗಿದೆ.
ಬೆಂಗಳೂರು ಪೂರ್ವ ತಾಲೂಕು, ಕೆ.ಆರ್​.ಪುರ ತಹಶೀಲ್ದಾರ್ ಎಸ್​. ಅಜಿತ್​ಕುಮಾರ್​ ರೈ ಮನೆಯಲ್ಲಿ ಈ ಭಾರಿ ಪ್ರಮಾಣದ ಆಲ್ಕೋಹಾಲ್ ಪತ್ತೆಯಾಗಿದೆ. ಅಜಿತ್ ಮನೆಯಲ್ಲಿ ವಿದೇಶಿ ಬ್ರ್ಯಾಂಡ್​ನ 16.2 ಲೀ. ಆಲ್ಕೋಹಾಲ್ ಪತ್ತೆಯಾಗಿದ್ದು, ಅದರ ಮೌಲ್ಯ 1.45 ಲಕ್ಷ ರೂ. ಎಂದು ಅಬಕಾರಿ ಅಧಿಕಾರಿಗಳು ಅಂದಾಜಿಸಿದ್ದು, ಅದನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಇದನ್ನೂ ಓದಿ:ಗೃಹಲಕ್ಷ್ಮಿ ವಿಳಂಬ?; ಅದೊಂದೇ ಕಾರಣಕ್ಕೆ ಸ್ವಲ್ಪ ತಡವಾಗುತ್ತಿದೆ ಎಂದ ಹೆಬ್ಬಾಳ್ಕರ್​!
ಅಜಿತ್​ಕುಮಾರ್​ ಮನೆಯಲ್ಲಿ 40 ಲಕ್ಷ ರೂ. ನಗದು ಮಾತ್ರವಲ್ಲದೆ, 1.9 ಕೋಟಿ ರೂ. ಮೌಲ್ಯದ ಆಸ್ತಿ-ಪಾಸ್ತಿ ಪತ್ತೆಯಾಗಿವೆ. ಅಜಿತ್ ಮನೆಯಲ್ಲಿ ಐಷಾರಾಮಿ ಕಾರುಗಳೂ ಪತ್ತೆಯಾಗಿದ್ದು, ಎರಡೂವರೆ ಕೋಟಿ ರೂ. ಮೌಲ್ಯದ ಇನ್ನೊಂದು ಕಾರ್ ಖರೀದಿ ಕುರಿತ ಬಿಲ್ ಕೂಡ ಸಿಕ್ಕಿದ್ದು, ಆ ಕಾರ್ ಇನ್ನಷ್ಟೇ ಪತ್ತೆಯಾಗಬೇಕಿದೆ.
ಜಾತಿಗೆ ಬಲಿಯಾಯ್ತು ಎರಡು ಜೀವ!: ಮಗಳ ಕತ್ತು ಹಿಸುಕಿ ಕೊಂದ ತಂದೆ; ನೊಂದ ಪ್ರಿಯಕರ ಸಾವಿಗೆ ಶರಣು!

‘ಇದು ರಾಜ್ಯ ಬಿಜೆಪಿ ನಾಯಕರ ನೈಜ ಮುಖ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
