ಉಡುಪಿ:ಜಿಲ್ಲೆಯಲ್ಲಿ ಡೆಡ್ಲಿ ಕರೊನಾ ಅಟ್ಟಹಾಸ ಮುಂದುವರಿದಿದೆ. ಭಾನುವಾರ 23 ಹೊಸ ಕೊವಿಡ್​-19 ಪ್ರಕರಣಗಳು ಪತ್ತೆಯಾಗಿ ಆತಂಕ ಮೂಡಿಸಿದ್ದವು.
ಇಂದು 16 ಮಂದಿಗೆ ಕರೊನಾ ಸೋಂಕು ದೃಢಪಟ್ಟಿದೆ. ಅದರಲ್ಲಿ 14 ಮಂದಿ ಮುಂಬೈನಿಂದ ಬಂದವರು ಮತ್ತು ಇಬ್ಬರು ದುಬೈನಿಂದ ಆಗಮಿಸಿದವರು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್​ ಮಾಹಿತಿ ನೀಡಿದ್ದಾರೆ.
ಆರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಎಂಟು ಮಕ್ಕಳಿಗೆ ಕರೊನಾ ಸೋಂಕು ತಗುಲಿದೆ. ಚಿಕ್ಕ ಮಕ್ಕಳಲ್ಲಿ ಕೊವಿಡ್​-19 ಪ್ರಮಾಣ ಹೆಚ್ಚುತ್ತಿರುವುದು ಆತಂಕ ಮೂಡಿಸುತ್ತಿದೆ. ಇವರೆಲ್ಲರನ್ನೂ ಸರ್ಕಾರಿ ಕ್ವಾರಂಟೈನ್​​ನಿಂದ ಕೊವಿಡ್​-19 ವಿಶೇಷ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಹಾಗೇ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆಯಾಗಿದ್ದು, ಮೂವರು ಗುಣಮುಖರಾಗಿದ್ದಾರೆ. ಮೂವರು ಪೊಲೀಸರಿಗೆ ಕರೊನಾ ತಗುಲಿದ ಹಿನ್ನೆಲೆಯಲ್ಲಿ ಅವರ ಸಂಪರ್ಕಕ್ಕೆ ಬಂದಿದ್ದ ನೂರಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 9 =
Remember me
