ಬೆಂಗಳೂರು:ಬಗೆದಷ್ಟೂ ಆಳ ಎಂಬಂತಾಗುತ್ತಿದೆ ಡ್ರಗ್ಸ್​ ಮಾಫಿಯಾ. ಮಾದಕ ಜಾಲವನ್ನು ಬುಡಸಮೇತ ಕಿತ್ತೊಗೆಯಲು ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿರುವ ಪೊಲೀಸರು ಡ್ರಗ್ಸ್ ಪೆಡ್ಲರ್​ಗಳ ಬಂಧನಕ್ಕೆ ಬಲೆ ಬೀಸಿದ್ದು, ಮತ್ತಿಬ್ಬರು 165 ಕೆಜಿ ಗಾಂಜಾ ಸಮೇತ ಸಿಕ್ಕಿಬಿದ್ದಿದ್ದಾರೆ.
ಜನನಿಬಿಡ ಪ್ರದೇಶದಲ್ಲೇ ರಾಜಾರೋಷವಾಗಿ ದೇವಸ್ಥಾನದ ಬಳಿಯೇ ಒಂದು ಕಾರಿನಿಂದ ಮತ್ತೊಂದು ಕಾರಿಗೆ ಗಾಂಜಾ ತುಂಬುತ್ತಿದ್ದ ಕೋರಮಂಗಲ ನಿವಾಸಿ ವಿಶ್ವಾಸ್ ಮತ್ತು ಮಾಲೂರು ತಾಲೂಕಿನ ಅಂಬರೀಶ್​ನನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹುಸ್ಕೂರು ರಸ್ತೆಯ ದೇವಸ್ಥಾನವೊಂದರ ಬಳಿಯೇ ಗಾಂಜಾ ಸರಬರಾಜು ಮಾಡುತ್ತಿದ್ದರು.ಇದನ್ನೂ ಓದಿರಿಡ್ರಗ್ಸ್ ಮಾಫಿಯಾ ಕಾರಣಕ್ಕೆ ಬೆಂಗಳೂರು ಕಾಂಗ್ರೆಸ್ ನಾಯಕರಿಗೆ ಶುರುವಾಗಿದೆ ಟೆನ್ಷನ್!
ದೇವಸ್ಥಾನದ ಬಳಿ 2 ಕಾರುಗಳನ್ನು ನಿಲ್ಲಿಸಿಕೊಂಡು ಒಂದು ಕಾರಿನಿಂದ ಇನ್ನೊಂದು ಕಾರಿಗೆ ಗಾಂಜಾ ತುಂಬಿದ್ದ ಚೀಲಗಳನ್ನು ವರ್ಗಾವಣೆ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪರಪ್ಪನ ಅಗ್ರಹಾರ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಗಾಂಜಾವನ್ನು ಸಣ್ಣ-ಸಣ್ಣ ಪೊಟ್ಟಣ ಕಟ್ಟಿ ಒಂದು ಪೊಟ್ಟಣಕ್ಕೆ 500 ರೂಪಾಯಿಯಂತೆ ಎಲೆಕ್ಟ್ರಾನಿಕ್ ಸಿಟಿ, ಪರಪ್ಪನ ಅಗ್ರಹಾರ, ಮಡಿವಾಳ, ಕೋರಮಂಗಲ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
‘ತುಪ್ಪ’ದ ಬೆಡಗಿ ರಾಗಿಣಿ ಮತ್ತೆ ಪೊಲೀಸ್​ ಕಸ್ಟಡಿಗೆ ಹೋಗಲು ಆ 7 ಕಾರಣ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 11 =
Remember me
