ಬೆಂಗಳೂರು:ನೀರಾವರಿಗೆ ಸಾಂಪ್ರದಾಯಿಕ ಇಂಧನ ಬದಲು ಸೌರಶಕ್ತಿ ಬಳಸುವ ಮೂಲಕ ಇಂಧನ ಸ್ವಾವಲಂಬನೆ ಸಾಧಿಸುವ ಪಿಎಂ ಕುಸುಮ್ ಯೋಜನೆಯಡಿ ಸೌರ ಪಂಪ್‌ಸೆಟ್ ಪಡೆಯಲು 18 ಸಾವಿರ ರೈತು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮಾಹಿತಿ ನೀಡಿದರು.
ಸ್ಥಳೀಯ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ (ಪಿಎಂ-ಕುಸುಮಬ್) ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತೇಜನ, ಇಂಧನ ಸಚಿವ ಕೆ.ಜೆ.ಜಾರ್ಜ್ ನಾಯಕತ್ವದಲ್ಲಿ ಹಸಿರು ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಸೌರ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಆಸಕ್ತ ರೈತರಿಗೆ ರಾಜ್ಯ ಸರ್ಕಾರ ತನ್ನ ಸಬ್ಸಿಡಿ ಪಾಲು ಶೇಕಡ 30 ರಿಂದ 50ಕ್ಕೇರಿಸಿದೆ. ಸೌರಮಿತ್ತ ಉಪಕ್ರಮ ರಾಜ್ಯದಲ್ಲಿ ಇಂಧನ ಖಾತರಿಗೆ ಉತ್ತೇಜನ ನೀಡಿದೆ ಎಂದು ಹೇಳಿದರು.
ಹಗಲು ಹೊತ್ತಿನಲ್ಲಿ ಬಯಸಿದಷ್ಟು ವಿದ್ಯುತ್ ಲಭಿಸುತ್ತದೆ, ಸ್ವಾವಲಂಬಿಗಳಾಗುತ್ತೇವೆ ಎಂದು ತಿಳಿದ ರೈತರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ‘ಸೌರಮಿತ್ರ’ ವೆಬ್‌ಸೈಟ್/ ಆ್ಯಪ್‌ನಲ್ಲಿ 18 ಸಾವಿರ ರೈತರು ನೋಂದಣಿ ಮಾಡಿಕೊಂಡಿದ್ದಾರೆ.
ಈ ಯೋಜನೆಯನ್ನು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಅನುಷ್ಠಾನ ಮಾಡುತ್ತಿದ್ದು, ಎಲ್ಲ ಎಸ್ಕಾಂಗಳು ಪೂರಕವಾಗಿ ಕೆಲಸ ಮಾಡುತ್ತಿವೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಹಗಲು ಹೊತ್ತು ಎಂಟು ತಾಸು ವಿದ್ಯುತ್ ಪೂರಯಕೆ ಸೌರ ಪಂಪ್‌ಸೆಟ್ ಆಸರೆಯಾಗಲಿದೆ ಎಂದು ಗೌರವ್ ಗುಪ್ತಾ ತಿಳಿಸಿದರು.
ಕುಸುಮ್-ಬಿಯಡಿ ರೈತರಿಗೆ ಸೌರ ಲಕಗಳು, ಸಬ್‌ಮರ್ಸಿಬಲ್/ ರ್ಸೇಸ್ ಡಿಸಿ ಪಂಪ್‌ಗಳು, ಮೌಂಟಿಂಗ್ ಸ್ಟ್ರಕ್ಚರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ರೈತರು ತಮ್ಮ ಆಧಾರ್, ಅರ್‌ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್‌ಲೈನ್ ಪೋರ್ಟಲ್ (https://souramitra.com )ನಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಣಿ ಸಮಸ್ಯೆಗಳನ್ನು ಬಗೆಹರಿಸಲು ಸಹಾಯವಾಣಿ (ಸಂಖ್ಯೆ 08022202100) ಸ್ಥಾಪಿಸಲಾಗಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಕುಸುಮ್ ಯೋಜನೆ ಅನುಷ್ಠಾನಗೊಳಿಸುತ್ತಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳು ತಮ್ಮ ಅನುಭವ ಹಂಚಿಕೊಂಡರು. ಹಲವು ವಿಷಯಗಳನ್ನು ಮಂಡಿಸಿ, ಪರಿಸರ ಸ್ನೇಹಿ ಹಸಿರು ಇಂಧನ ಉತ್ಪಾದನೆಗೆ ಒತ್ತು ನೀಡುವುದರ ಮೇಲೆ ಕಾರ್ಯಾಗಾರ ಹೆಚ್ಚಿನ ಗಮನ ಕೇಂದ್ರೀಕರಿಸಿತು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:17 − two =
Remember me
