ಬೆಂಗಳೂರು :ಬಹುವರ್ಷಗಳಿಂದ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಗೆ ವೇಗ ಸಿಕ್ಕಿರಲಿಲ್ಲ. ಇದೀಗ ಸಿಎಂ ಬಿ.ಎಸ್​.ಯಡಿಯೂರಪ್ಪನವರ ನೇತೃತ್ವದಲ್ಲಿ ಈ ಯೋಜನೆ ಮುಂದುವರಿಯುವ ಶುಭಸೂಚನೆ ಬಂದಿದೆ. ಹಾಸನ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗಾಗಿ 193.65 ಕೋಟಿ ರೂ.ಗಳ ಬಜೆಟ್​​ಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.
ಹಾಸನ ಜಿಲ್ಲೆಯ ಬೂವನಹಳ್ಳಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಯನ್ನು ಉಡಾನ್​ ಸ್ಕೀಮ್​ನ ಅಡಿಯಲ್ಲಿ 175 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳುವ ನಿರ್ಧಾರವಾಗಿತ್ತು. ಇದೀಗ ಆ ಮೊತ್ತಕ್ಕೆ ಇನ್ನೂ 18 ಕೋಟಿ ರೂ.ಗಳನ್ನು ಸೇರಿಸಿ ಬಜೆಟ್​ಅನ್ನು ಅಂಗೀಕರಿಸಲಾಗಿದೆ.
ಇದನ್ನೂ ಓದಿ:ಸೊಪ್ಪು-ತರಕಾರಿ ಒದ್ದು ದರ್ಪ ಮೆರೆದ ಪಿಎಸ್​ಐ ಸಸ್ಪೆಂಡ್
ಇತ್ತೀಚೆಗೆ, ಕೋವಿಡ್​ ಪರಿಸ್ಥಿತಿ ಪರಿಶೀಲನೆಗಾಗಿ ಹಾಸನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಶೀಘ್ರವಾಗಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದ್ದರು. ಇದೀಗ ನುಡಿದಂತೆ ಅನುದಾನ ನೀಡಿ, ಮಾತು ಉಳಿಸಿಕೊಂಡಿದ್ದಾರೆ.
ಕುಡಿದ ಮತ್ತಿನಲ್ಲಿ ರೈಲ್ವೇ ಹಳಿಯ ಮೇಲೆ ದ್ವಿಚಕ್ರವಾಹನ ಎಸೆದರು!

ಮೂರನೇ ಅಲೆಗೆ ಸಿದ್ಧತೆ: ಬೆಂಗಳೂರಲ್ಲಿ ಮಕ್ಕಳಿಗಾಗಿ 1,419 ಬೆಡ್​​ ಮೀಸಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
