ಬೆಂಗಳೂರು:ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಜು.16ರಿಂದ 27ರವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೆಲವೊಂದು ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಲಾಗಿದೆ.ಅದರಂತೆ, ಏಕಕಾಲದಲ್ಲಿ ವಿದ್ಯಾರ್ಥಿಗಳು ಹಾಜರಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾಲೇಜುಗಳ ಹಂತದಲ್ಲಿ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಕ್ರಮ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಪ್ರತಿ ಕಾಲೇಜಿಗೂ ಪ್ರತ್ಯೇಕವಾದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
ಈ ನಿಟ್ಟಿನಲ್ಲಿ ಸೂಕ್ತ ವೇಳಾಪಟ್ಟಿ ಬಿಡುಗಡೆ ಮಾಡುವಂತೆ ಸರ್ಕಾರ ಎಲ್ಲಾ ಕಾಲೇಜುಗಳಿಗೂ ಆದೇಶಿಸಿದೆ.
ಪರೀಕ್ಷಾ ಶುಲ್ಕ ಈ ರೀತಿ ಇದೆ:
ಒಂದು ವಿಷಯಕ್ಕೆ: 101 ರೂ; ಎರಡು ವಿಷಯಗಳಿಗೆ: 201 ರೂ ಹಾಗೂ ಮೂರು ಮತ್ತು ಹೆಚ್ಚಿನ ವಿಷಯಗಳಿಗೆ 302 ರೂ. ಪರೀಕ್ಷಾ ಶುಲ್ಕವಿದೆ.ಈ ಶುಲ್ಕ ಪಾವತಿ ನಾಳೆಯಿಂದ ಅಂದರೆ ಜುಲೈ 8ರಿಂದ ಆರಂಭವಾಗಲಿದೆ. ಕೊನೆಯ ದಿನ ಜುಲೈ 14. ಒಂದು ವೇಳೆ ಶುಲ್ಕ ಪಾವತಿಸಲು ವಿದ್ಯಾರ್ಥಿಗಳಿಗೆ ಯಾವುದಾದರೂ ಕಾರಣಕ್ಕೆ ಈ ದಿನಾಂಕದಲ್ಲಿ ಸಾಧ್ಯವಾಗದೇ ಹೋದರೆ ಪರೀಕ್ಷಾ ದಿನದಂದೇ ಶುಲ್ಕ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.
ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ 30ರ ಬೆ:ಗ್ಗೆ 11 ಗಂಟೆಗೆ ಪ್ರಕಟಿಸುವಂತೆ ಸೂಚಿಸಲಾಗಿದೆ. ಫಲಿತಾಂಶವನ್ನು ವಾಟ್ಸ್‌ಆ್ಯಪ್‌, ಎಸ್‌ಎಂಎಸ್‌, ಇ-ಮೇಲ್‌ ಅಥವಾ ಜಿಲ್ಲಾ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿದೆ.
ಕುತೂಹಲ ಮೂಡಿಸುತ್ತಿದ್ದಾಳೆ ‘ಚಿನ್ನದ ರಾಣಿ’: ಐಎಎಸ್‌ ಅಧಿಕಾರಿ ತಲೆದಂಡ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nineteen − two =
Remember me
