ತುಮಕೂರು:ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸತ್ತವರ ಸಂಖ್ಯೆ ಐದಕ್ಕೇರಿದೆ. ಎರಡು ದಂಪತಿ ಜೊತೆಗೆ ಒಂದು ಮಗು ಕೂಡ ಸಾವಿಗೀಡಾಗಿದೆ.
ತುಮಕೂರಿನ ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಭೀಕರ ಅಪಘಾತ ಸಂಭವಿಸಿತ್ತು. ಖಾಸಗಿ ಬಸ್​ ಹಾಗೂ ಇನ್ನೋವಾ ಕಾರು ಅಪಘಾತಕ್ಕೆ ಈಡಾಗಿದ್ದು, ಮೂಲತಃ ಚಳ್ಳಕೆರೆ ತಾಲೂಕಿನ ಗೋವಿಂದ ನಾಯಕ (58), ಅವರ ಪತ್ನಿ ತಿಪ್ಪಮ್ಮ (52) ಸಾವಿಗೀಡಾಗಿದ್ದಾರೆ. ಇನ್ನಿಬ್ಬರ ವಿಳಾಸ ಪತ್ತೆಯಾಗಿಲ್ಲ.
ಇದನ್ನೂ ಓದಿ:ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು!
ಗೋವಿಂದನಾಯಕ ಅವರು ಬೆಂಗಳೂರಿನ ವಿಜಯನಗರದಲ್ಲಿ ವಾಸವಿದ್ದರು. ಬೆಂಗಳೂರಿನಿಂದ ಚಳ್ಳಕೆರೆಗೆ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದಾಗ ಶಿರಾ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ವಿಭಜಕದಿಂದ ಎಗರಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಚಿಕಿತ್ಸೆಗೆಂದು ಉಡುಪಿಯಿಂದ ಬೆಂಗಳೂರಿಗೆ ಬಂದವನ ಎರಡೂ ಕಾಲು ಪೂರ್ತಿ ಜಖಂ!
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿತ್ತು. ಸ್ಥಳಕ್ಕೆ ತುಮಕೂರು ಎಎಸ್​ಪಿ ಮರಿಯಪ್ಪ ಹಾಗೂ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದಿಂದಾಗಿ ಸುಮಾರು 2 ಗಂಟೆ ಸಂಚಾರ ದಟ್ಟಣೆ ಆಗಿತ್ತು.
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 3 =
Remember me
