ಗುರುಗ್ರಾಮ್‌:ವೇಗವಾಗಿ ಬಂದ ಐಷಾರಾಮಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿರುವ ಘಟನೆ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ನಡೆದಿದೆ.
ಕಾರು ಗಾಲ್ಫ್ ಕೋರ್ಸ್ ರಸ್ತೆಯ ಸೆಕ್ಟರ್ 56 ರಿಂದ ಬಂದು ಸಿಕಂದರಪುರ ಕಡೆಗೆ ಹೋಗುತ್ತಿತ್ತು. ಸೆಕ್ಟರ್ 27ರಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕವೇ ಸರ್ವೀಸ್ ಲೇನ್ ಮೇಲೆ ಬಿದ್ದಿದೆ. ಈ ಪರಿಣಾಮ ವಾಹನ ಮರಕ್ಕೆ ಡಿಕ್ಕಿ ಹೊಡೆದ ತಕ್ಷಣ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ.
ಇದನ್ನೂ ಓದಿ:ಪುರಾಣ ಪ್ರಸಿದ್ಧ ಕದ್ರಿ ದೇವಸ್ಥಾನಕ್ಕೆ ನುಗ್ಗಲು ಪ್ರಯತ್ನಿಸಿದ ಅನ್ಯ ಕೋಮಿನವರು! ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು…
ಕೆಂಪು ಬಣ್ಣದ ಪೋರ್ಷೆ ಕಾರು ಸಂಪೂರ್ಣ ಜಖಂಗೊಂಡಿದೆ. ಘರ್ಷಣೆಯಿಂದ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟು ಬೂದಿಯಾಯಿತು. ಈ ಸ್ಪೋರ್ಟ್ಸ್ ಕಾರಿನ ಬೆಲೆ ಸುಮಾರು 2 ಕೋಟಿ ರೂ.ಆಗಿದೆ. ಈ ಭೀಕರ ಅವಘಡದ ಕಾರಿನ ಚಿತ್ರಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ.
2.2 ಕೋಟಿ ರೂ. ಮೌಲ್ಯದ ಕಾರಿನ ಚಾಲಕನ ಕೈ ಮತ್ತು ಕಾಲುಗಳಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಷಕರ ಬೇಜವಾಬ್ದಾರಿ; ಮನೆಯಲ್ಲಿ ಮಲಗಿದ್ದ ಮಗಳಿಗಾಗಿ ಪೊಲೀಸರ ಜತೆ ಊರೆಲ್ಲಾ ಹುಡುಕಿದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 7 =
Remember me
