ರಾಯಚೂರು:ಶಾಲಾ ವಾಹನ ಹಾಗೂ ಕೆಎಸ್​ಆರ್​ಟಿಸಿ ಬಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಸಮರ್ಥ್​ ಅಮರೇಶ್​ (07) ಹಾಗೂ ಶ್ರೀಕಾಂತ್​ ಮಾರೇಶ್​ (07) ಎಂದು ಗುರುತಿಸಲಾಗಿದ್ದು, ಇವರಿಬ್ಬರು ಲೊಯೋಲಾ​ ಶಾಲೆಯ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ. ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕಾಲು ತುಂಡಾಗಿದ್ದು, ಗಾಯಾಳುಗಳನ್ನು ರಿಮ್ಸ್​ಗೆ ದಾಖಲಿಸಲಾಗಿದೆ.
ಇದನ್ನೂ ಓದಿ:VIDEO| ಅಸಿಸ್ಟೆಂಟ್​ ಕೆಲಸಕ್ಕೆ ಫ್ರೆಶರ್ಸ್​​ ಬೇಕಾಗಿದ್ದಾರೆ; ವರ್ಷದ ಪ್ಯಾಕೇಜ್​ 6 ಲಕ್ಷ ರೂ. ಎಂದ ಸೋಡಾ ಶಾಪ್​ ಮಾಲೀಕ
ಶಾಲಾ ಮಕ್ಕಳನ್ನು ಕರೆದುಕೊಂಡು ಮಾನ್ವಿಯ ಲೊಯೋಲಾ ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ರಾಯಚೂರು ಕಡೆ ಹೊರಟ್ಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಶಾಲಾ ವಹನ ನಜ್ಜುಗುಜ್ಜಾಗಿದ್ದು, ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್​ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ನಿತೀಶ್​, ಮೃತರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 3 ಲಕ್ಷ ರೂ. ಪರಿಹಾರವನ್ನು ಸರ್ಕಾರದ ವತಿಯಿಂದ ಘೋಷಿಸಲಾಗಿದೆ. ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡಿಸಲಾಗುವುದು. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 2 =
Remember me
