ವಿಜಯಪುರ:ದೇಶ ಮಾತ್ರವಲ್ಲದೆ ರಾಜ್ಯದ ಹಲವೆಡೆಯಲ್ಲೂ ಭಾರಿ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿ ಆಗಲಾರಂಭಿಸಿವೆ. ಆಲಮಟ್ಟಿ ಜಲಾಯಶ ಕೂಡ ತುಂಬಲಾರಂಭಿಸಿದ್ದು, ಪೂರ್ತಿ ಭರ್ತಿಯಾಗಲು ಇನ್ನು ಎರಡೇ ಮೀಟರ್ ಬಾಕಿ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಆಲಮಟ್ಟಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಸೋಮವಾರ ಬೆಳಗ್ಗೆ 82 ಸಾವಿರ ಕ್ಯೂಸೆಕ್ ಇದ್ದ ಒಳಹರಿವು ಸಂಜೆ ಆಗುತ್ತಿದ್ದಂತೆ 1.09 ಲಕ್ಷ ಕ್ಯೂಸೆಕ್‌ಗೆ ತಲುಪಿದೆ.
ಒಳಹರಿವಿನ ಪ್ರಮಾಣ ಇನ್ನೂ ಹೆಚ್ಚಾಗುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದ 26 ಗೇಟ್‌ಗಳ ಪೈಕಿ 18 ಗೇಟ್‌ಗಳಿಂದ 30 ಸಾವಿರ ಕ್ಯೂಸೆಕ್ ಹಾಗೂ ವಿದ್ಯುದಾಗಾರದ ಮೂಲಕ 45 ಸಾವಿರ ಕ್ಯೂಸೆಕ್ ಸೇರಿ ಒಟ್ಟು 72 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಆಲಮಟ್ಟಿ ಜಲಾಶಯದ ಗರಿಷ್ಠ 519.60 ಮೀಟರ್ ಎತ್ತರದಲ್ಲಿ 123.081 ಟಿಎಂಸಿ ನೀರು ಸಂಗ್ರಹಿಸಬಹುದಾಗಿದ್ದು, ಸೋಮವಾರ ಸಂಜೆಯವರೆಗೆ 517.17 ಮೀಟರ್ ಎತ್ತರದಲ್ಲಿ 86.59 ಟಿಎಂಸಿ ನೀರು ಸಂಗ್ರಹವಾಗಿತ್ತು.
ಇದನ್ನೂ ಓದಿ:ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..
ಮಹಾರಾಷ್ಟದ ಪಶ್ಚಿಮ ಘಟ್ಟಗಳಲ್ಲಿ ಸುರಿಯುವ ಮಳೆಯಿಂದಾಗಿ ಕೃಷ್ಣಾ ನದಿ ಉಕ್ಕಿ ಹರಿಯುತ್ತದೆ. ಪರಿಣಾಮ ಕೃಷ್ಣಾ ನದಿ ತೀರದ ಗ್ರಾಮಸ್ಥರು ಪ್ರವಾಹ ಸ್ಥಿತಿಯನ್ನು ಅನೇಕ ಬಾರಿ ಅನುಭವಿಸುತ್ತ ಬಂದಿದ್ದಾರೆ. ಈ ಬಾರಿ ಈ ಭಾಗದಲ್ಲಿ ಮಳೆ ಕೊರತೆ ಇದ್ದರೂ ಕೃಷ್ಣಾ ಹಂತ ಹಂತವಾಗಿ ಉಕ್ಕೇರುತ್ತಿದ್ದು, ಲಕ್ಷಾಂತರ ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಡುವುದರಿಂದ ನದಿ ತೀರದ ಜಮೀನು ಹೊಂದಿದ ರೈತರು ಪರದಾಡುವಂತಾಗುತ್ತದೆ. ಪಂಪ್‌ಸೆಟ್‌ಗಳ ಸ್ಥಳಾಂತರ ಮಾಡಬೇಕಾಗುತ್ತದೆ. ಜತೆಗೆ ಹೆಚ್ಚಿನ ನೀರು ಹರಿದು ಬಂದರೆ ಬೆಳೆ ಜಲಾವೃತವಾಗುವ ಆತಂಕ ಕಾಡುತ್ತಿದೆ.

ವರ್ಣರಂಜಿತ ಕೆಆರ್​ಎಸ್​: ಬಣ್ಣಗಳಿಂದ ಕಂಗೊಳಿಸುತ್ತಿರುವ ಕನ್ನಂಬಾಡಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
