ಬೆಂಗಳೂರು:ಪಡಿತರ ಕಾರ್ಡ್​ಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಪ್ರಕ್ರಿಯೆ ಮಂಗಳವಾರ ಶುರುವಾಗಿದ್ದು, 2 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಆಹಾರ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಮಂಗಳವಾರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಧಾರ್ ಜೋಡಣೆ ಅವಧಿಯಲ್ಲಿ ಪಡಿತರ ಅಂಗಡಿ ರಜೆ ದಿನಗಳಂದೂ ತೆರೆದಿರಲಿದೆ ಎಂದರು.
ರಾಜ್ಯದಲ್ಲಿ 10,94,160 ಅಂತ್ಯೋದಯ, 1,15,98,234 ಬಿಪಿಎಲ್ ಹಾಗೂ 20,28,417 ಎಪಿಎಲ್ ಪಡಿತರ ಚೀಟಿಗಳಿವೆ. ಪಡಿತರ ಚೀಟಿಗಾಗಿ 2,40,862 ಅರ್ಜಿಗಳು ಸ್ವೀಕೃತಗೊಂಡಿದ್ದು, ಪ್ರತಿಯೊಬ್ಬರಿಗೂ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿರುವವರನ್ನು ಗುರುತಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈಗಾಗಲೇ 1 ಲಕ್ಷ ಕಾರ್ಡ್ ವಾಪಸ್ ಪಡೆಯಲಾಗಿದ್ದು, 96 ಲಕ್ಷ ರೂ. ದಂಡ ವಸೂಲು ಮಾಡಲಾಗಿದೆ ಎಂದು ತಿಳಿಸಿದರು.
ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರಿಗೆ ವಾಪಸ್ ನೀಡಲು 2 ತಿಂಗಳ ಕಾಲಾವಕಾಶ ನೀಡಲಾಗಿದೆ. ಅಷ್ಟರಲ್ಲಿ ವಾಸಪ್ ನೀಡದಿದ್ದರೆ ದಂಡ ವಿಧಿಸಲಾಗುವುದೆಂದು ಸಚಿವರು ಎಚ್ಚರಿಸಿದರು. 91 ಅನುದಾನಿತ, 16 ಅನುದಾನೇತರ, 222 ಖಾಸಗಿ ಮತ್ತು 22 ಸ್ವಯಂ ಸೇವಾ ಸಂಸ್ಥೆಗಳು ಸೇರಿ 351 ಸರ್ಕಾರೇತರ ಕಲ್ಯಾಣ ಸಂಸ್ಥೆಗಳ 32,077 ಫಲಾಭವಿಗಳಿಗೆ ಅಕ್ಕಿ ಹಾಗೂ ಗೋಧಿ ನೀಡಿಕೆ ಮುಂದುವರಿಸಲು ಆದೇಶಿಸಲಾಗಿದೆ. ಯಾವ ಸಂಸ್ಥೆಗಳಿಗೂ ಪಡಿತರ ನಿಲ್ಲಿಸುವುದಿಲ್ಲ ಎಂದರು.
ಎಲ್ಲಾದರೂ ಪಡೆಯಿರಿ:ಮುಂದಿನ ತಿಂಗಳಿಂದ ರಾಜ್ಯದ ಯಾವುದೇ ಮೂಲೆಯಲ್ಲಿ ಬೇಕಾದರೂ ಪಡಿತರ ಪಡೆಯುವ ಸೌಲಭ್ಯ ಕಲ್ಪಿಸಲಾಗು ವುದು ಎಂದು ಗೋಪಾಲಯ್ಯ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
