ಬೆಂಗಳೂರು:ರಿಯಲ್ ಎಸ್ಟೇಟ್, ಬಿಲ್ಡರುಗಳಿಂದ ಸರ್ಕಾರದ ಪ್ರಭಾವಿಗಳು 2 ಸಾವಿರ ಕೋಟಿ ರೂ. ಸುಲಿಗೆ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.ಬೆಂಗಳೂರಿನಲ್ಲಿ ದೊಡ್ಡ ಬಿಲ್ಡರುಗಳ ಸಭೆ ಮಾಡಿರುವ ಪ್ರಭಾವಿಗಳು, ಲೋಕಸಭೆ ಚುನಾವಣೆಯ ನೆಪ ಇಟ್ಟುಕೊಂಡು ಪ್ರತಿ ಚದರ ಅಡಿಗೆ 100 ರೂ. ಲೆಕ್ಕದಲ್ಲಿ ವಸೂಲಿಗೆ ಇಳಿದಿದ್ದಾರೆ. ಆ ಮೂಲಕ ಭರ್ತಿ 2 ಸಾವಿರ ಕೋಟಿ ರೂ. ಸಂಗ್ರಹಕ್ಕೆ ಗುರಿ ಇಟ್ಟುಕೊಂಡಿದ್ದಾರೆ ಎಂದು ಆರೋಪ ಮಾಡಿದರು.ಬಿಲ್ಡರುಗಳ ಸಭೆ ನಡೆಸಿ ಇಷ್ಟಿಷ್ಟು ಕಪ್ಪ ಒಪ್ಪಿಸಲೇಬೇಕು ಎಂದು ಡಿಮಾಂಡ್ ಮಾಡಿದ್ದಾರೆ. ಅವರಿಗೆ ಜನರು ಪೆನ್ನು ಪೇಪರ್ ಕೊಟ್ಟಿದ್ದು ಈ ರೀತಿ ಸುಲಿಗೆ ಮಾಡಲಿಕ್ಕಾಗಿಯೆ? ಎಂದು ದೂರಿದರು.
2-3 ಲಕ್ಷ ಕೋಟಿ ಮೌಲ್ಯದ ಭೂಮಿ ಗುಳುಂಬೆಂಗಳೂರು-ಮೈಸೂರು ಮೂಲಭೂತ ಕಾರಿಡಾರ್ ಯೋಜನೆ (ನೈಸ್ ರಸ್ತೆ) ಬಹುಕೋಟಿ ರೂ.ಗಳ ಅತಿ ದೊಡ್ಡ ಹಗರಣವಾಗಿದ್ದು, ಸುಮಾರು 2-3 ಲಕ್ಷ ಕೋಟಿ ರೂ. ಮೌಲ್ಯದ ಭೂಮಿಯನ್ನು ಪಟ್ಟಭದ್ರರು ನುಂಗಿದ್ದಾರೆ ಎಂದು ಆರೋಪ ಮಾಡಿದರು.ರೈತರಿಂದ ಕಸಿದುಕೊಂಡಿರುವ ಈ ಭೂಮಿಯನ್ನು ವಾಪಸ್ ಪಡೆದು ರೈತರಿಗೆ ಮರು ಹಸ್ತಾಂತರ ಮಾಡಬೇಕು. ನೈಸ್ ಭೂ ಕರ್ಮಕಾಂಡದಲ್ಲಿ ಈ ಸರ್ಕಾರದ ಪ್ರಭಾವೀ ಸಚಿವರೊಬ್ಬರು ನೇರವಾಗಿ ಶಾಮೀಲಾಗಿದ್ದಾರೆ. ಆ ಕಂಪನಿ ಜತೆ ಕೈಜೋಡಿಸಿ ಸಾವಿರಾರು ಕೋಟಿ ರೂ. ಬೆಲೆಯ ರೈತರ ಭೂಮಿಯನ್ನು ಲೂಟಿ ಮಾಡಿದ್ದಾರೆ ಎಂದು ಟೀಕಿಸಿದರು.
14 ಸಾವಿರ ಎಕರೆ ಹೆಚ್ಚುವರಿ ಭೂಮಿರೈತರಿಂದ ನೈಸ್ ಯೋಜನೆಗೆ 14 ಸಾವಿರ ಎಕರೆ ಭೂಮಿಯನ್ನು ಹೆಚ್ಚುವರಿಯಾಗಿ ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಅದನ್ನು ಕೂಡಲೇ ವಾಪಸ್ ಪಡೆಯಬೇಕು. ಸಿದ್ದರಾಮಯ್ಯ ಅವರೇ ಎರಡನೇ ಬಾರಿಗೆ ಸಿಎಂ ಆಗಿದ್ದಾರೆ. ಪೂರ್ಣ ಬಹುಮತವೂ ಇದೆ. ರೈತರ ಬಗ್ಗೆ ಕಾಳಜಿ ಇದ್ದರೆ, ಅವರನ್ನು ಉಳಿಸಬೇಕಲ್ಲವೇ? ಹಾಗಿದ್ದರೆ ಕೂಡಲೇ ಕ್ರಮ ತೆಗೆದುಕೊಳ್ಳಿ. ದಮ್ಮು, ತಾಕತ್ತಿನ ಬಗ್ಗೆ ಹೇಳುತ್ತೀರಲ್ಲ, ನಿಮಗೆ ದಮ್ಮು ತಾಕತ್ತು ಇದ್ದರೆ ರೈತರ ಜಮೀನು ವಾಪಸ್ ಪಡೆಯಿರಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + 7 =
Remember me
