ವಿಜಯಪುರ:ಆಟವಾಡುವ ಗುಂಗಿನಲ್ಲಿ ತೆರೆದಿದ್ದ ಕೊಳವೆ ಬಾವಿಗೆ ಎರಡು ವರ್ಷದ ಮಗುವೊಂದು ಆಯಾತಪ್ಪಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಸಂಭವಿಸಿದೆ.
ಇದನ್ನೂ ಓದಿ:ಸುಮಲತಾ ಅಂಬರೀಶ್‌ಗೆ ಬೆಂಬಲವಾಗಿ ನಿಲ್ಲಲು ಆಸ್ಪತ್ರೆಗೆ ದಾಖಲಾಗುವುದನ್ನೇ ಮುಂದೂಡಿದ ನಟ ದರ್ಶನ್‌!
ಆಟವಾಡಲು ಹೋಗಿ ಕೊಳೆವೆ ಬಾವಿಗೆ ಬಿದ್ದ ಬಾಲಕನ ಸುದ್ದಿ ತಿಳಿದ ಪೋಷಕರು ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಾಯ ಕೋರಿದ್ದಾರೆ. ಬಾವಿಗೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಭೀಮಾತೀರದಲ್ಲಿ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನೊಂದರಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದೆ. ಸಾತ್ವಿಕ ಮುಜಗೊಂಡ (2) ಎಂಬ ಹೆಸರಿನ ಮಗು ಕೊಳವೆ ಬಾವಿಗೆ ಬಿದ್ದಿದ್ದು, ಪೋಷಕರ ಆಕ್ರಂದನ ಕರಳು ಹಿಂಡುವಂತಿದೆ. ಘಟನೆ ತಿಳಿದು ಇಡೀ ಗ್ರಾಮಸ್ಥರು ಸ್ಥಳಕ್ಕೆ ಜಮಾಯಿಸಿದ್ದು, ಇಂಡಿ ತಾಲೂಕಿನ ಕೇಂದ್ರದಿಂದ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದಾರೆ. ಸದ್ಯ ರಕ್ಷಣಾ ಕಾರ್ಯ ಮುಂದುವರೆದಿದ್ದು, ಘಟನೆ ಇಂಡಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
2021ರಲ್ಲಿ ಮುಂಬೈ ಇಂಡಿಯನ್ಸ್​ ಬಿಟ್ಟಿದ್ದೂ ಇದೇ ಕಾರಣಕ್ಕೆ… ಮುಖಕ್ಕೆ ಹೊಡದಂಗೆ ಹೇಳಿದ್ರು ರವಿಶಾಸ್ತ್ರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 20 =
Remember me
