ವಿಜಯಪುರ:ಆಟವಾಡುವ ಗುಂಗಿನಲ್ಲಿ ತೆರೆದಿದ್ದ ಕೊಳವೆ ಬಾವಿಗೆ ಎರಡು ವರ್ಷದ ಮಗುವೊಂದು ಆಯಾತಪ್ಪಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಸಂಭವಿಸಿದೆ. ಸತತ 12 ಗಂಟೆಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ತಂಡಕ್ಕೆ ಮಗುವನ್ನು ಹೊರತೆಗೆಯುವುದು ದೊಡ್ಡ ಸವಾಲಾಗಿದ್ದು, ಸದ್ಯ ಕಾರ್ಯಾಚರಣೆ ಕೆಲಸ ಮುಂದುವರೆದಿದೆ.
ಇದನ್ನೂ ಓದಿ:ಕನ್ನಡದ ಪ್ಯಾನ್​ ಇಂಡಿಯಾ ಚಿತ್ರಕ್ಕೆ ತೆಲುಗಿನ ಸ್ಟಾರ್​ ನಿರ್ದೇಶಕನ ಸಾಥ್​ ; ಸ್ಮೈಲ್​ ಶ್ರೀನು ಜತೆಯಾದ ಪೂರಿ ಜಗನ್ನಾಥ್​
ಭೀಮಾತೀರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದ್ದು, 2 ವರ್ಷದ ಬಾಲಕ ಸಾತ್ವಿಕ್​ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಾನೆ. ಮಗುವಿನ ಕಾಲುಗಳ ಅಲುಗಾಟ ದೃಶ್ಯದಲ್ಲಿ ಸೆರೆಯಾಗಿದ್ದು, ಬಾಲಕ ಜೀವಂತವಾಗಿ, ಸುರಕ್ಷಿತವಾಗಿ ಹೊರಬರಲಿ ಎಂದು ಎಲ್ಲರು ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಭೀಕರದ ಬರದಿಂದಾಗಿ ಬತ್ತಿದ ಭೀಮಾ ದಡದಲ್ಲಿ ಜೀವ ಜಲಕ್ಕಾಗಿ ಮಗುವಿನ ಪೋಷಕರು ಕೊಳವೆ ಬಾವಿ ತೆಗೆಸಿದ್ದರು. ಬೋರ್​ ತೆಗೆಸಿ ಕೆಲವೇ ಗಂಟೆಗಳಲ್ಲಿ ಇಂತಹ ದುರ್ಘಟನೆ ಸಂಭವಿಸುತ್ತದೆ ಎಂದು ಊಹಿಸಿರಲಿಲ್ಲ ಎಂದು ಮಗುವಿನ ತಂದೆ ಅಳಲು ತೋಡಿಕೊಂಡಿದ್ದಾರೆ. ಸದ್ಯ 20 ಅಡಿ ಆಳದಲ್ಲಿ ಸಿಲುಕಿರುವ ಬಾಲಕನಿಗೆ ಆಮ್ಲಜನಕ ಪೂರೈಕೆ ಮಾಡಲಾಗಿದ್ದು, ಮಧ್ಯದಲ್ಲಿ ಸಿಲುಕಿರುವ ಕಲ್ಲನ್ನು ಬದಿಗೆ ಸರಿಸಿ ಮಗುವನ್ನು ಸುರಕ್ಷಿತವಾಗಿ ಹೊರಗೆ ಕರೆತರಬೇಕಿದೆ. ಯಾವುದೇ ತೊಂದರೆಯಾಗದಂತೆ ತುರ್ತಾಗಿ ಮಗುವನ್ನು ಹೊರತರುವುದು ಸದ್ಯ ದೊಡ್ಡ ಸವಾಲಾಗಿದೆ.
ಈ ಹೋಟೆಲ್​ಗೆ ಮಾತ್ರ ಹೋಗಲೇಬೇಡಿ! ಇಲ್ಲಿಗೆ ಹೋದ್ರೆ ಖಂಡಿತ ಅವಮಾನ, ಕಣ್ಣೀರು ತಪ್ಪಿದ್ದಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 4 =
Remember me
