ಬೆಂಗಳೂರು:ಏನೂ ಅರಿಯದ ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದ ವಿನೋದ್​ ಕುಮಾರ್ (2) ಮೃತ ದುರ್ದೈವಿ. ಉಮೇಶ್​ ಎಂಬುವವರು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದರು. ಕೊಪ್ಪಳ ಮೂಲದ ಅಂಬರೀಷ್​ ದಂಪತಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿ ಸಮೀಪದ ಕೋಡಿಪಾಳ್ಯದಲ್ಲಿ ಶೆಡ್​ನಲ್ಲಿ ನೆಲೆಸಿದ್ದರು. ಅಂಬರೀಷ್​ ದಂಪತಿಗೆ ಒಬ್ಬನೇ ಪುತ್ರ ವಿನೋದ್​. ಬಿಜಿಎಸ್​ ಆಸ್ಪತ್ರೆಯಲ್ಲಿ ತಂದೆ ಸೆಕ್ಯೂರಿಟಿ ಗಾರ್ಡ್​ ಆಗಿಕೆಲಸ ಮಾಡುತ್ತಿದ್ದು, ತಾಯಿ ಕೂಲಿ ಕೆಲಸ ಮಾಡುತ್ತಿದ್ದಾರೆ.
ಶುಕ್ರವಾರ ಬೆಳಗ್ಗೆ ಎಂದಿನಂತೆ ತಂದೆ ಕೆಲಸಕ್ಕೆ ಹೋಗಿದ್ದು, ತಾಯಿ ಮಗನಿಗೆ ಸ್ನಾನ ಮಾಡಿಸಿ ನಂತರ ತಾನೂ ಸ್ನಾನಕ್ಕೆ ಹೋಗಿದ್ದರು. ಈ ವೇಳೆ ಅಕ್ಕಪಕ್ಕದ ಮಕ್ಕಳ ಜತೆ ಆಟವಾಡುತ್ತಿದ್ದ ವಿನೋದ್​, ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್​ ಅಳವಡಿಸಲೆಂದು ತೋಡಲಾಗಿದ್ದ ಗುಂಡಿಯಲ್ಲಿ ಬಿದ್ದಿದ್ದ. ಮಕ್ಕಳು ಕೂಗಿಕೊಂಡಾಗ ಸ್ಥಳೀಯರು ಬಂದು ಬಾಲಕನನ್ನು ಮೇಲಕ್ಕೆತ್ತಿ ಕೂಡಲೇ ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಮಗು ಬದುಕಲಿಲ್ಲ.
ಲಿಫ್ಟ್ ಅಳವಡಿಸಲು 6 ಅಡಿ ಗುಂಡಿ ತೋಡಿದ್ದರು. ಇತ್ತೀಚೆಗೆ ಸುರಿದ ಮಳೆ ಇಂದಾಗಿ ನೀರು ತುಂಬಿಕೊಂಡಿತ್ತು. ಯಾರೂ ಹೋಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಟ್ಟಡ ಮಾಲೀಕ ಮತ್ತು ಗುತ್ತಿಗೆದಾರನ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರುಳಕುಡಿಯನ್ನು ಉಳಿಸಿಕೊಳ್ಳಲು ಹೋದಾಕೆಯೂ ಬದುಕಲಿಲ್ಲ… ದುರಂತ ಅಂತ್ಯಕಂಡ ಅಮ್ಮ-ಮಗ

ಇಬ್ಬರು ಪತ್ನಿಯರೊಂದಿಗಿನ ಕಾಮದಾಟದ ಲೈವ್​ ದೃಶ್ಯವನ್ನೇ ಮಾರಾಟಕ್ಕಿಟ್ಟ 24ರ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 1 =
Remember me
