ವಿಜಯಪುರ:ನಿನ್ನೆ ಆಟವಾಡುವ ಗುಂಗಿನಲ್ಲಿ ತೆರೆದಿದ್ದ ಕೊಳವೆ ಬಾವಿಗೆ ಎರಡು ವರ್ಷದ ಮಗುವೊಂದು ಆಯಾತಪ್ಪಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಸಂಭವಿಸಿತ್ತು. ಸತತ 15 ಗಂಟೆಗಳಿಂದ ಕಾರ್ಯಾಚರಣೆ ನಡೆಸಿದ ಬಳಿಕ ಇದೀಗ ಮಗುವನ್ನು ಹೊರತೆಗೆಯುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದ್ದು, ಕೋಟ್ಯಾಂತರ ಕನ್ನಡಿಗರ ಪ್ರಾರ್ಥನೆ ಕಡೆಗೂ ಫಲಿಸಿತು.
ಇದನ್ನೂ ಓದಿ:ರಮ್ಯಾ ಹೋದರು, ಅಮಿತ್​ ತ್ರಿವೇದಿ ಬಂದರು ; ಉತ್ತರಕಾಂಡ ಚಿತ್ರಕ್ಕೆ ಹೊಸ ಎಂಟ್ರಿ!
ಭೀಮಾತೀರದಲ್ಲಿ ಹೃದಯ ವಿದ್ರಾವಕ ಘಟನೆಯಲ್ಲಿ 2 ವರ್ಷದ ಬಾಲಕ ಸಾತ್ವಿಕ್​ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ. ಮಗುವಿನ ಕಾಲುಗಳ ಅಲುಗಾಟ ದೃಶ್ಯದಲ್ಲಿ ಸೆರೆಯಾಗಿತ್ತು. ಇದೀಗ ಬಾಲಕ ಜೀವಂತವಾಗಿ, ಸುರಕ್ಷಿತವಾಗಿ ಹೊರಬಂದಿದ್ದು, ಪೋಷಕರಲ್ಲಿ ಆನಂದ ಮುಗಿಲು ಮುಟ್ಟಿದೆ.
ಭೀಕರದ ಬರದಿಂದಾಗಿ ಬತ್ತಿದ ಭೀಮಾ ದಡದಲ್ಲಿ ಜೀವ ಜಲಕ್ಕಾಗಿ ಮಗುವಿನ ಪೋಷಕರು ಕೊಳವೆ ಬಾವಿ ತೆಗೆಸಿದ್ದರು. ಬೋರ್​ ತೆಗೆಸಿ ಕೆಲವೇ ಗಂಟೆಗಳಲ್ಲಿ ಇಂತಹ ದುರ್ಘಟನೆ ಸಂಭವಿಸುತ್ತದೆ ಎಂದು ಊಹಿಸಿರಲಿಲ್ಲ ಎಂದು ಮಗುವಿನ ತಂದೆ ಅಳಲು ತೋಡಿಕೊಂಡಿದ್ದರು. ಸದ್ಯ 200 ಅಡಿ ಆಳದ ಸುರಂಗದಲ್ಲಿ 20 ಅಡಿ ಆಳದಲ್ಲಿ ಸಿಲುಕಿದ್ದ ಬಾಲಕನಿಗೆ ರಕ್ಷಣಾ ತಂಡ ನಿರಂತರವಾಗಿ ಆಮ್ಲಜನಕ ಪೂರೈಕೆ ಮಾಡಿತ್ತು.
ಬಾಲಕನನ್ನು ರಕ್ಷಣೆ ಮಾಡುವ ಮಧ್ಯದಲ್ಲಿ ಸಿಲುಕಿದ್ದ ಕಲ್ಲನ್ನು ಬದಿಗೆ ಸರಿಸಿ ಮಗುವನ್ನು ಸುರಕ್ಷಿತವಾಗಿ ಹೊರಗೆ ಕರೆತರಬೇಕಿತ್ತು. ಈ ಸವಾಲನ್ನು ಯಶಸ್ವಿಯಾಗಿ ಪೂರೈಸಿದ ರಕ್ಷಣಾ ಪಡೆಗೆ ಕುಟುಂಬಸ್ಥರು ಹಾಗೂ ಇಡೀ ರಾಜ್ಯದ ಜನತೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದೆ. ಸದ್ಯ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
2021ರಲ್ಲಿ ಮುಂಬೈ ಇಂಡಿಯನ್ಸ್​ ಬಿಟ್ಟಿದ್ದೂ ಇದೇ ಕಾರಣಕ್ಕೆ… ಮುಖಕ್ಕೆ ಹೊಡದಂಗೆ ಹೇಳಿದ್ರು ರವಿಶಾಸ್ತ್ರಿ

26 ವರ್ಷಕ್ಕೆ 22 ಮಗುವಿನ ತಾಯಿ ಈ ಯುವತಿ! 105 ಮಕ್ಕಳನ್ನು ಪಡೆಯುವುದೇ ಈಕೆಯ ಗುರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + eighteen =
Remember me
