ಸಾಗರ:ಕರ್ನಾಟಕದ ಈ ಲೇಖನಿ ಭಾರತದಲ್ಲೇ ದಾಖಲೆ ಬರೆದಿದೆ. ಅರ್ಥಾತ್, ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ತಯಾರಾದ ಈ 20 ಅಡಿ ಉದ್ದದ ಲೇಖನಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಸ್ಥಾನ ಸಿಕ್ಕಿದೆ.
ಸಾಗರದ ಆವಿನಹಳ್ಳಿಯ ಗಣೇಶ್ ಹಾರ್ಡ್​ವೇರ್ ಮತ್ತು ಜೈಗಣೇಶ್ ವುಡ್​ವರ್ಕ್ ಮಾಲೀಕ, ಕುಶಲಕರ್ಮಿಯೂ ಆಗಿರುವ ಕೃಷ್ಣಮೂರ್ತಿ ಆಚಾರ್ ಹತ್ತು ವರ್ಷಗಳ ಹಿಂದೆ ಈ ಪೆನ್ ತಯಾರಿಸಿದ್ದರು.
ಇದನ್ನೂ ಓದಿ:ಮಹಾಲಯ ಅಮಾವಾಸ್ಯೆ ಜಾತ್ರೆ; ಮಲೆಮಹದೇಶ್ವರ ದೇವಸ್ಥಾನದಲ್ಲಿ ಮೂರೇ ದಿನದಲ್ಲಿ 1 ಕೋಟಿ ರೂಪಾಯಿಗೂ ಅಧಿಕ ಆದಾಯ!
ಇಪ್ಪತ್ತು ಅಡಿ ಉದ್ದದ ಲೇಖನಿಗೆ ನವದೆಹಲಿಯಲ್ಲಿ ಶನಿವಾರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ಗೆ ದಾಖಲಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಲೇಖನಿಯನ್ನು ಸಾಹಿತ್ಯ ಸಮ್ಮೇಳನ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಪ್ರದರ್ಶನಕ್ಕೆ ಇಡಲಾಗಿತ್ತು.

ಕೃಷ್ಣಮೂರ್ತಿ ಆಚಾರ್ ವಿಶ್ವಕರ್ಮಸ್ ಎಂಬ ಹೆಸರಿನಲ್ಲಿ ಈ ಬೃಹತ್ ಪೆನ್ ತಯಾರಿಸಿದ್ದಾರೆ. ಹೈಬ್ರೀಡ್ ಅಕೇಶಿಯಾ ಕಟ್ಟಿಗೆಯನ್ನು ಉಪಯೋಗಿಸಿ ಸುಮಾರು 15 ದಿನಗಳ ನಿರಂತರ ಶ್ರಮದಿಂದ ಸಿದ್ಧಪಡಿಸಿದ್ದಾರೆ.
ಈ ವಿಶೇಷವಾದ ಪೆನ್ನನ್ನು ಗಿನ್ನೆಸ್ ಮತ್ತು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್​ಗೆ ಕಳಿಸಲಾಗಿತ್ತು. ಇದೀಗ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಪೆನ್​ಗೆ ಸ್ಥಾನ ಸಿಕ್ಕಿದೆ.
ನಾಳೆ ವಿಶ್ವ ಆಹಾರ ದಿನ: ನಾವು ಆಹಾರವನ್ನು ಹೇಗೆ ನೋಡಬೇಕು, ಹೇಗೆ ಸೇವಿಸಬೇಕು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 11 =
Remember me
