ವಿಜಯಪುರ:ಯುವತಿಯೊಬ್ಬಳು ಹೆತ್ತವರ ಕಣ್ಣೆದ್ದುರಲ್ಲೇ ಭೀಮಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರದಲ್ಲಿ ಭಾನುವಾರ (ಅ.25) ನಡೆದಿದೆ.
ಐಶ್ವರ್ಯ ಶ್ರೀಪಾಲ ಕಬ್ಬಿನ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಧಾರವಾಡದ ನವಲಗುಂದ ಪಟ್ಟಣದ ನಿವಾಸಿ. ಕುಟುಂಬಸ್ಥರೊಂದಿಗೆ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.
ಮಾರ್ಗ ಮಧ್ಯೆ ವಿಜಯಪುರದ ಆಲಮೇಲ ಮತ್ತು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ನಡುವೆ ಭೀಮಾನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆ ಬಳಿ ವಾಹನ ನಿಲ್ಲಿಸುವಂತೆ ಐಶ್ವರ್ಯಾ ಕೇಳಿದ್ದಾಳೆ. ಬಳಿಕ ನದಿಗೆ ನಾಣ್ಯ ಹಾಕಬೇಕೆಂದು ಹೇಳಿ ವಾಹನ ಇಳಿದು ಸೇತುವೆಯ ಅಂಚಿಗೆ ಹೋಗಿ, ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ:ಪ್ರಧಾನಿ ಮೋದಿಯಿಂದ ಚೀನಾ, ಪಾಕ್​​ ಜತೆಗಿನ ಯುದ್ಧ ದಿನಾಂಕ ಈಗಾಗಲೇ ನಿರ್ಧಾರ: ಬಿಜೆಪಿ ಮುಖಂಡನ ಹೇಳಿಕೆ
ಐಶ್ವರ್ಯ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ಹೋಗಲೆಂದೇ ವಿಜಯಪುರದ ಇಂಡಿ ಪಟ್ಟಣದಲ್ಲಿದ್ದ ಅಕ್ಕನ ಮನೆಗೆ ತಾಯಿಯ ಜತೆ ಬಂದಿದ್ದಳು. ಎಲ್ಲರೂ ಒಟ್ಟುಗೂಡಿ ದೇವಸ್ಥಾನಕ್ಕೆ ಹೋಗುವಾಗ ಮಾರ್ಗ ಮಧ್ಯೆ ಈ ದುರ್ಘಟನೆ ನಡೆದಿದೆ. ಐಶ್ವರ್ಯಾಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಪೊಲೀಸ್​ ತನಿಖಾ ನಂತರವಷ್ಟೇ ಕಾರಣ ಹೊರಬೀಳಲಿದೆ.
ಉಡುಪಿ ಯುವತಿ ಅನುಮಾನಾಸ್ಪದ ಸಾವು ಪ್ರಕರಣ: ಕಾಲ್​ ರೆಕಾರ್ಡ್ಸ್​ನಲ್ಲಿ ಸ್ಫೋಟಕ ಮಾಹಿತಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 1 =
Remember me
