ಬೆಂಗಳೂರು:ಕೋವಿಡ್​ ಆಸ್ಪತ್ರೆಯಲ್ಲಿ ಬೆಡ್​ಗಳು ಖಾಲಿ ಇಲ್ಲ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರಿಗೆಲ್ಲ ಸೂಕ್ತ ಚಿಕಿತ್ಸೆಗೆ ಕ್ರಮಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ನಡುವೆ ರಾಜ್ಯ ಸರ್ಕಾರ ರಾಜಧಾನಿಯ ಪ್ಯಾಲೇಸ್ ಗ್ರೌಂಡ್​ನಲ್ಲಿ 2 ಸಾವಿರ ಬೆಡ್​ಗಳ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದೆ.
ಬೆಡ್​ಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಸಿಎಂ ಬಿ.ಎಸ್​. ಯಡಿಯೂರಪ್ಪ ಒಂದು ವಾರ ಗಡುವು ನೀಡಿದ್ದಾರೆ. ಶೀಘ್ರವೇ ಅರಮನೆ ಮೈದಾನದಲ್ಲಿ ಕೋವಿಡ್​ ಸೋಂಕಿತರಿಗೆ ಚಿಕಿತ್ಸಾ ಕಾರ್ಯ ಶುರುವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.ಇದನ್ನೂ ಓದಿರಿvideo/ ಕರೊನಾ ವಾರ್ಡಿನಲ್ಲಿ ‘ನರಕ’ ದರ್ಶನ, ಶೌಚಗೃಹದ ನೀರನ್ನೇ ಕುಡಿದ ಸೋಂಕಿತರು!
ಕೋವಿಡ್​ ಆಸ್ಪತ್ರೆಯಲ್ಲಿ ಬೆಡ್​ಗಳು ಖಾಲಿ ಇಲ್ಲ. ಕರೊನಾ ಸೋಂಕು ದೃಢಪಟ್ಟರೂ ಕೆಲವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿಲ್ಲ ಎನ್ನುವ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಸರ್ಕಾರ, 2 ಸಾವಿರ ಬೆಡ್​ ನಿರ್ಮಾಣದ ಜತೆಗೆ ಟಾಯ್ಲೆಟ್ ನಿರ್ಮಾಣಕ್ಕೂ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಕೋವಿಡ್​ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್​ಡೌನ್​ ಬೇಡ: ಪ್ರತಾಪ್​ಸಿಂಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seven =
Remember me
