ಬೆಂಗಳೂರು:ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಮೀರ್ ಅಹ್ಮದ್​ ಖಾನ್​ ನಡುವೆ ಟ್ವೀಟ್ ವಾರ್ ಮುಂದುವರಿದ್ದು, 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್ ಎಂದು ಎಚ್​ಡಿಕೆಗೆ ಜಮೀರ್​ ಮಾತಿನಲ್ಲೇ ಚಿವುಟಿದ್ದಾರೆ.
2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ? ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ? ಎಂದು ಸರಣಿ ಟ್ವೀಟ್​ ಮೂಲಕ ಎಚ್​ಡಿಕೆ ಕಿಡಿಕಾರಿದ್ದರು.ಇದನ್ನೂ ಓದಿರಿಕರೊನಾ ಸೋಂಕು: ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು
ಇದಕ್ಕೆ ಪ್ರತಿಕ್ರಿಯಿಸಿರುವ ಜಮೀರ್​, ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ ಜಮೀರ್ ಅಹ್ಮದ್ ಜೆಡಿಎಸ್ ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ. ನಿಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದಿದ್ದಾರೆ.ಇದನ್ನೂ ಓದಿರಿಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ
ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ, ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್ ಎಂದಿರುವ ಜಮೀರ್ 2004 ರಾಜಕೀಯವನ್ನ ನೆನಪಿಸಿದ್ದಾರೆ.
2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ@hd_kumaraswamy, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ.ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?1/5
— B Z Zameer Ahmed Khan (@BZZameerAhmedK)March 31, 2021

ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ? ಎಂದು ಕುಮಾರಸ್ವಾಮಿಯನ್ನ ಜಮೀರ್​ ಪ್ರಶ್ನಿಸಿದ್ದಾರೆ.
2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು? ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್? ಎಂದು ಸರಣಿ ಟ್ವೀಟ್​ ಮೂಲಕ ಪ್ರಶ್ನಿಸಿದ್ದಾರೆ.
ಸಿಡಿ ಕೇಸ್​ಗೆ ಟಕ್ಕರ್​ ಕೊಟ್ಟ ವಕೀಲೆ ಮೀರಾ ರಾಘವೇಂದ್ರ!

ಪತಿಯನ್ನ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ! ಬೇಲ್​ ಮೇಲೆ ಹೊರ ಬಂದವಳಿಂದ ಮತ್ತೊಂದು ನೀಚ ಕೃತ್ಯ

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ನಾನು ನಂದಿ ಅಲ್ಲ, ಜಗದೀಶ! ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ: ಸಿಡಿ ಲೇಡಿ ವಕೀಲರ ಖಡಕ್​ ವಾರ್ನಿಂಗ್​ ಯಾರಿಗೆ?

2005ರ ಚಾಮರಾಜಪೇಟೆ ಉಪಚುನಾವಣೆ ವೇಳೆ ‘ಮುಸ್ಲಿಂ ಅಭ್ಯರ್ಥಿ’ ಕಾಣೆಯಾಗಿದ್ದೇಕೆ? ಜಮೀರ್​ಗೆ ಎಚ್​ಡಿಕೆ ಟಾಂಗ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + 14 =
Remember me
