ಬೆಂಗಳೂರು:2020ನೇ ಸಾಲಿನ ಪುಸ್ತಕ ಆಯ್ಕೆ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಗ್ರಂಥಾಲಯ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ನಡೆದ ಕರ್ನಾಟಕ ಪ್ರಕಾಶಕರ ಸಂಘದ ಪದಾಧಿಕಾರಿಗಳ ಸಮಾಲೋಚನಾ ಸಭೆ ಬಳಿಕ ಮಾತನಾಡಿದರು. 2021-2022ರ ಪ್ರಕಟಣೆಗಳನ್ನು ಖರೀದಿಸಲು ಆದ್ಯತೆ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದರು.
ಪ್ರಕಾಶಕರ ಸಂಘದ ಅಧ್ಯಕ್ಷ ಪ್ರಕಾಶ್ ಕಂಬತ್ತಳ್ಳಿ ಮಾತನಾಡಿ, ಗ್ರಂಥಲಾಯ ಇಲಾಖೆಗೆ ಅಧಿಕಾರಿಗಳ ಸಂಬಳ ಹೊರತುಪಡಿಸಿ ಎಲ್ಲವೂ ನಡೆಯುವುದು ಸೆಸ್ ಹಣದಿಂದ. ಈಗಾಗಲೇ ಬಿಬಿಎಂಪಿ ಗ್ರಂಥಾಲಯ ಇಲಾಖೆಗೆ ಹಣ ಬಿಡುಗಡೆ ಮಾಡಿದೆ. ಪಟ್ಟಿ ಬಿಡುಗಡೆಗೊಳಿಸಿ ಬಜೆಟ್ ಅನುಮೋದನೆ ಮಾಡಿದರೆ ಗ್ರಂಥಾಲಯ ಕ್ರಿಯಾಶೀಲ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದರು.
ಪ್ರಧಾನ ಕಾರ್ಯದರ್ಶಿ ಅಭಿನವ ರವಿಕುಮಾರ್ ಮಾತನಾಡಿ, ಬಜೆಟ್ ಅನುಮೋದನೆಯಾಗದೆ ಗ್ರಂಥಾಲಯ ಇಲಾಖೆ ಪುಸ್ತಕ ಖರೀದಿಸಲಾಗುತ್ತಿಲ್ಲ. ಇದರಿಂದಾಗಿ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ತೊಡಕಾಗಿದೆ. ಗ್ರಂಥಾಲಯ ಅಧಿನಿಯಮದಂತೆ ಪ್ರತಿ ವರ್ಷ ಫೆಬ್ರವರಿ ತಿಂಗಳಿನೊಳಗೆ ಅನುಮೋದನೆಯಾಗಬೇಕು. ಆದರೆ ಅರ್ಧ ವರ್ಷವಾದರೂ ಬಜೆಟ್ ಅನುಮೋದನೆಯಾಗದೆ ಯಾವ ಚಟುವಟಿಕೆಯೂ ನಡೆಯುತ್ತಿಲ್ಲ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಸರ್ಕಾರದ ಪ್ರಧಾನ ಕಾರ್ಯದರ್ಶಿ ನಿತೀಶ್‌ಕುಮಾರ್ ಸಿಂಗ್ ಅವರಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಇದೇ ಸಂದರ್ಭದಲ್ಲಿ ನವ ಕರ್ನಾಟಕ ಪ್ರಕಾಶನದ ರಮೇಶ ಉಡುಪ ಮಾತನಾಡಿ, ಪುಸ್ತಕ ಆಯ್ಕೆಗೆ ಸಮಿತಿ ರದ್ದುಪಡಿಸಿ ಹೊಸ ಸಮಿತಿ ರಚಿಸಬೇಕು ಎಂದು ಮನವಿ ಮಾಡಿದರು.ಸೃಷ್ಟಿ ನಾಗೇಶ್ ಮಾತನಾಡಿ, ಗ್ರಂಥಾಲಯ ಅಭಿವೃದ್ಧಿ ಪ್ರಾಧಿಕಾರ ಪುನರ್ ರಚಿಸಬೇಕು ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 6 =
Remember me
