ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಿಇಟಿ 2024ರ ಫಲಿತಾಂಶ ನೋಡಲು ಬಹಳ ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಇದೀಗ ಫಲಿತಾಂಶದ ಅಧಿಕೃತ ಪ್ರಕಟಣೆ ಹೊರಬಿದ್ದಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ರ್ಯಾಕಿಂಗ್ ಬಿಡುಗಡೆಗೊಳಿಸಿದೆ.
ಇದನ್ನೂ ಓದಿ:ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಜೋಶಿ
2024ರ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 18-04-2024 ಮತ್ತು 19-04-2024 ರಂದು ಕರ್ನಾಟಕ ರಾಜ್ಯದಲ್ಲಿನ ಒಟ್ಟು 737 ಕೇಂದ್ರಗಳಲ್ಲಿ ನಡೆಸಲಾಗಿದೆ. ಒಟ್ಟು 3,49,653 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಆ ಪೈಕಿ 3,10,314 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ.
ಇದನ್ನೂ ಓದಿ:ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಅಗತ್ಯ: ಕೆ.ಟಿ.ಬೇಬಿಮ್ಯಾಥ್ಯೂ
ಪರೀಕ್ಷೆಗೆ ಹಾಜರಾಗಿದ್ದ 3,20,314 ವಿದ್ಯಾರ್ಥಿಗಳಲ್ಲಿ 2,74,595 ಮಂದಿ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಅರ್ಹತೆ ಪಡೆದಿದ್ದಾರೆ. ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮದ ಹೊರತಾಗಿ ಪ್ರಶ್ನೆಗಳು ಬಂದಿರುವುದಾಗಿ ದೂರು ಬಂದ ಹಿನ್ನಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ವಿಷಯ ಪರಿಣಿತರ ವರದಿಯನ್ನಾಧರಿಸಿ ಈ ಕೆಳಗಿನಂತೆ ಪ್ರಶ್ನೆಗಳನ್ನು ಕೈಬಿಟ್ಟು ಮೌಲ್ಯಮಾಪನ ಮಾಡಿಲಾಗಿರುತ್ತದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಪ್ರಶ್ನೆಗಳನ್ನು ಕೈಬಿಡಲಾಗಿದೆ. ಭೌತಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ತಲಾ ಒಂದು ಕೃಪಾಂಕ ನೀಡಲಾಗಿದೆ.
ಇಂಜಿನಿಯರಿಂಗ್‌ನಲ್ಲಿ ನಾರಾಯಣ ಒಲಿಂಪಿಯಾಡ್ ಸ್ಕೂಲ್‌ನ ಹರ್ಷ ಹೃಷಿಕೇಶ್ ಯುಟುಕುರಿ ಟಾಪ್ ರ‌್ಯಾಂಕರ್ ಆಗಿದ್ದು,ಪಶುವೈದ್ಯಕೀಯದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ನಿಹಾರ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಪ್ರಕಟವಾದ ಫಲಿತಾಂಶ ಚೆಕ್ ಮಾಡಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವೆಬ್​ಸೈಟ್​ ಲಿಂಕ್:http://kea.kar.nic.in
ಟಿ20 ವಿಶ್ವಕಪ್​ಗೆ ವಿರಾಟ್​, ರೋಹಿತ್​ ಆಯ್ಕೆ ಸರಿಯಿಲ್ಲ… ಬಿಸಿಸಿಐ ವಿರುದ್ಧ ಸಿಡಿದೆದ್ದ ಮಾಜಿ ಕ್ರಿಕೆಟಿಗ

15 ದಿನಗಳಿಂದ ಕಾಣದ ಭವಾನಿ ರೇವಣ್ಣಗೆ ಕಾದು ಕುಳಿತಿರುವ ಎಸ್​ಐಟಿ! ಹೆಚ್ಚಾಗುತ್ತಿದೆ ಬಂಧನದ ಕಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 9 =
Remember me
