ನವದೆಹಲಿ:ಜೂ.4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಅಧಿಕೃತವಾಗಿ ಹೊರಬೀಳಲಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ದೇಶವ್ಯಾಪಿ ಏಳು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಕಣದಲ್ಲಿರುವ 8 ಸಾವಿರ ಅಭ್ಯರ್ಥಿಗಳ ಭವಿಷ್ಯ ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಿ ತಿಳಿಯಲಿದೆ.
ಇದನ್ನೂ ಓದಿ:ಐಪಿಎಲ್​ ಬಹುಮಾನ ಮೊತ್ತದ ದಾಖಲೆಯನ್ನು ಹಿಂದಿಕ್ಕಿದ ಟಿ20 ವಿಶ್ವಕಪ್​!
ಬೆಳಗ್ಗೆ 8ರಿಂದಲೇ ಅಂಚೆ ಮತಎಣಿಕೆ ಪ್ರಾರಂಭವಾಗಲಿದ್ದು, ಇದಾದ 30 ನಿಮಿಷಗಳ ಬಳಿಕ ಇವಿಎಂ ಮತ ಎಣಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ. ಇನ್ನು ಇತ್ತೀಚೆಗಷ್ಟೇ ಹೊರಬಿದ್ದ ಚುನಾವಣೋತ್ತರ ಸಮೀಕ್ಷಾ ವರದಿ ದೇಶದಲ್ಲಿ ಬಿಜೆಪಿ 300ಕ್ಕೂ ಅಧಿಕ ಸೀಟ್​ಗಳನ್ನು ಗೆಲ್ಲಲಿದೆ ಎಂದು ತಿಳಿಸಿತ್ತು. ಈ ಬೆನ್ನಲ್ಲೇ ಬಿಜೆಪಿ ನಾಯಕರು ಈಗಾಗಲೇ ಪಕ್ಷದ ಪ್ರಧಾನ ಕಛೇರಿಯಲ್ಲಿ ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಫಲಿತಾಂಶ ಪ್ರಕಟಕ್ಕೂ ಮುನ್ನವೇ ಭಾರೀ ಪ್ರಮಾಣದ ಸಿಹಿ ತಿಂಡಿಗಳನ್ನು ತಯಾರಿಸಿರುವ ಬಿಜೆಪಿ, ಸಂಭ್ರಮಕ್ಕಾಗಿ ಕಾತರದಿಂದ ಕಾಯುತ್ತಿದೆ. ಇದೇ ರೀತಿ ಕಾಂಗ್ರೆಸ್​ ನಾಯಕರು ಕೂಡ ತಮ್ಮ ಪ್ರಧಾನ ಕಛೇರಿಗಳಲ್ಲಿ ಸಿಹಿ ತಯಾರಿಕೆ ಮಾಡಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಒಟ್ಟಾರೆ ಯಾರಿಗೆ ಸಿಗಲಿದೆ ಅಧಿಕಾರದ ಚುಕ್ಕಾಣಿ ಎಂಬುದನ್ನು ಸದ್ಯ ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + nineteen =
Remember me
