ಬೆಂಗಳೂರು:ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು 2027ರ ಮಾರ್ಚ್ 31ಕ್ಕೆ ಪೂರ್ಣಗೊಳಿಸಲು ಯೋಜಸಿಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಬಿ.ಸುರೇಶ್ ಗೌಡ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಈ ಯೋಜನೆಯಡಿ ಮುಂಗಾರು ಮಳೆ ಅವಧಿಯಲ್ಲಿ 24.01 ಟಿಎಂಸಿ ಅಡಿ ಪ್ರಮಾಣದ ಪ್ರವಾಹದ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ನೀರು ಹರಿಸಲು ಯೋಜಿಸಲಾಗಿದೆ ಎಂದು ಹೇಳಿದರು.ಈ ಯೋಜನೆಯಿಂದ ಚಿತ್ರದುರ್ಗ ಜಿಲ್ಲೆಗೆ ನೀರು ಹರಿಸಲು ಉದ್ದೇಶಿಸಿಲ್ಲ. ಎಲ್ಲ ಲ್‌ಟಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜುಲೈ ಅಂತ್ಯಕ್ಕೆ ನೀರನ್ನೆತ್ತಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು ಎಂದರು.
ನವೆಂಬರ್ ಅಂತ್ಯಕ್ಕೆ ಗುರುತ್ವ ಕಾಲುವೆ ಸರಪಳಿ 42 ಕಿ.ಮೀ. ನಿಂದ 231 ಕಿ.ಮೀ.ತುಮಕೂರುವರೆಗೆ ನಾಲೆಗೆ ನೀರನ್ನು ಹರಿಸುವುದು ಮತ್ತು ಲಕ್ಕೇನಹಳ್ಳಿ ಸಮತೋಲನಾ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ಹೇಳಿದರು.
2025ರ ನವೆಂಬರ್ ಅಂತ್ಯಕ್ಕೆ ಗರುತ್ವ ಕಾಲುವೆ 231ಕಿ.ಮೀ. ನಿಂದ ಸರಪಳಿ 261.69 ಕಿ.ಮೀ.ವರೆಗೆ ಗೌರಿಬಿದನೂರು, ಟಿ.ಜಿ.ಹಳ್ಳಿ-ರಾಮನಗರ ಪೀಡರ್ ಒಳಗೊಂಡಂತೆ ನಾಲೆಗೆ ನೀರು ಹರಿಸುವುದು ಮತ್ತು ಲಕ್ಕೇನಹಳ್ಳಿ ಸಮತೋಲನಾ ಜಲಾಶಯದ ಶೇ.50ರಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಲು ಯೋಜಿಸಿರುವುದಾಗಿ ತಿಳಿಸಿದರು.
2026ರ ನವೆಂಬರ್ ಅಂತ್ಯಕ್ಕೆ ಲಕ್ಕೇನಹಳ್ಳಿಗೆ ಸಮತೋಲನಾ ಜಲಾಶಯದ ಬಾಕಿ ಶೇ.50ರಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ನಂತರ ಎಲ್ಲ ಪೀಡರ್ ಕಾಮಗಾರಿ ಪೂರ್ಣಗೊಳಿಸಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರನ್ನು ಒದಗಿಸಲು ಯೋಜಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fourteen =
Remember me
