ಬೆಂಗಳೂರುಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ-3ರ ಲಿತಾಂಶವನ್ನು ಪ್ರಕಟಿಸಿದ್ದು, ಶೇ.23.73 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಜೂ.24ರಿಂದ ಜು.5ರ ವರೆಗೆ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮಂಡಳಿ ಜಾಲತಾಣ http://karresults.nic.inನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಜನ್ಮದಿನಾಂಕ ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸಿ ಲಿತಾಂಶ ವೀಕ್ಷಿಸಬಹುದು. ಪರೀಕ್ಷೆ-1, 2 ಮತ್ತು 3ರಲ್ಲಿ ವಿಷಯವಾರು ಗಳಿಸಿದ ಅತಿ ಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಲಿತಾಂಶವನ್ನು ನಂತರದಲ್ಲಿ ಮಂಡಳಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
ಪರೀಕ್ಷೆ-3ಕ್ಕೆ ನೋಂದಣಿ ಮಾಡಿಕೊಂಡಿದ್ದ 76,005 ಮಂದಿಯಲ್ಲಿ 75,466 ಮಂದಿ ಹಾಜರಾಗಿದ್ದು, 17,911 (ಶೇ.23.73) ಮಂದಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.21.71. ವಾಣಿಜ್ಯ ವಿಭಾಗದಲ್ಲಿ ಶೇ.23.58 ಮತ್ತು ವಿಜ್ಞಾನದಲ್ಲಿ ಶೇ.27.06 ಮಂದಿ ಪಾಸ್ ಆಗಿದ್ದಾರೆ.
ಉತ್ತರ ಪತ್ರಿಕೆಗಳ ಛಾಯಾಪ್ರತಿಗೆ ಅರ್ಜಿ ಸಲ್ಲಿಸಲು ಜು.21 ಕೊನೆಯ ದಿನವಾಗಿದೆ. ಉತ್ತರ ಪತ್ರಿಕೆಗಳ ಛಾಯಾಪ್ರತಿ ಪಡೆದವರು ಜು.18ರಿಂದ 24ರವರೆಗೆ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಮತ್ತು ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670 ರೂ.ಗಳನ್ನು ನಿಗದಿ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
