ಹಾಸನ:ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ದುರುಳರು ಸಿನಿಮೀಯ ಶೈಲಿಯಲ್ಲಿ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿರುವ ಬಿಟ್ಟಗೌಡನಹಳ್ಳಿಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅಪಹರಣಕ್ಕೊಳಗಾದ ಶಿಕ್ಷಕಿಯನ್ನು ಅರ್ಪಿತಾ ಎಂದು ಗುರುತಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
A school teacher was kidnapped, allegedly by a relative, after she and her family members rejected his marriage proposal, at#Bittagowdanahallion the outskirts of#Hassancity early today morning.The teacher,#Arpitha, was on her way to school around 8 am when she was bundled…pic.twitter.com/fw10qTcwQm
ಇದನ್ನೂ ಓದಿ:BBKS 10; ಕ್ಯಾಪ್ಟನ್ಸಿ ಟಾಸ್ಕ್​ನಿಂದ ವಿನಯ್​ನನ್ನು​ ಹೊರಗಿಟ್ಟ ನಮ್ರತಾ
ಈ ಕುರಿತು ಪ್ರತಿಕ್ರಿಯಿಸಿರುವ ಅರ್ಪಿತಾ ತಾಯಿ, ನಿಮ್ಮ ಮಗಳನ್ನು ನಮ್ಮ ಮಗನಿಗೆ ಮದುವೆ ಮಾಡಿಕೊಡಿ ಎಂದು ಕೆಲ ದಿನಗಳ ಹಿಂದೆ ರಾಮು ಹಾಗೂ ಆತನ ಪೋಷಕರು ನಮ್ಮ ಮನೆಗೆ ಬಂದಿದ್ದರು. ನಾವು ಆಗುವುದಿಲ್ಲ ಎಂದು ಹೇಳಿ ಅವರನ್ನು ವಾಪಸ್​ ಕಳುಹಿಸಿದ್ದೆವು. ನಾವು ಮಗಳನ್ನು ಕೊಡುವುದಿಲ್ಲ ಎಂದಿದ್ದಕ್ಕೆ ಸಿಟ್ಟಿಗೆದ್ದು ಅವರು ಅಪಹರಣ ಮಾಡಿದ್ದಾರೆ ಎಂದು ಶಿಕ್ಷಕಿ ಅರ್ಪಿತಾ ತಾಯಿ ಆರೋಪಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮೊಹಮ್ಮದ್​ ಸುಜೀತಾ ಆರೋಪಿಗಳ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮೊಹಮ್ಮದ್​ ಸುಜೀತಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 7 =
Remember me
