ಕಾರವಾರ:ತಪ್ಪು ಮಾಹಿತಿ ನೀಡಿ ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್ ಯೋಜನೆಯಲ್ಲಿ ವರ್ಷಕ್ಕೆ 6 ಸಾವಿರ ರೂ. ಪಡೆದ ಜಿಲ್ಲೆಯ ಕೆಲವರಿಗೆ ಶಾಕ್ ಕಾದಿದೆ. ಆದಾಯ ತೆರಿಗೆ ಪಾವತಿಸುತ್ತಿರುವ ಜಿಲ್ಲೆಯ 2301 ಕಿಸಾನ್ ಸಮ್ಮಾನ ಯೋಜನೆಯ ಫಲಾನುಭವಿಗಳಿಗೆ ಕೃಷಿ ಇಲಾಖೆ ನೋಟಿಸ್ ನೀಡಲಾರಂಭಿಸಿದೆ.
ರೈತರ ಉದ್ಧಾರಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಯ ಫಲಾನುಭವಿ ಯಾಗಲು ಹಲವು ನಿಬಂಧನೆ ವಿಧಿಸಲಾಗಿತ್ತು. ಅದರಲ್ಲಿ ಆದಾಯ ತೆರಿಗೆ ಪಾವತಿ ಮಾಡುವವರು ಈ ಸೌಲಭ್ಯ ಪಡೆಯಲು ಅರ್ಹರಲ್ಲ ಎಂಬ ನಿಬಂಧನೆಯೂ ಇದೆ. ಆದರೆ, ಹಲವು ಆದಾಯ ತೆರಿಗೆದಾರರು ತಪ್ಪು ಮಾಹಿತಿ ನೀಡಿ ಕಳೆದ ಎರಡು ವರ್ಷಗಳಿಂದ ಹಣ ಪಡೆದಿರುವುದನ್ನು ಕೇಂದ್ರ ಸರ್ಕಾರ ಗುರುತಿಸಿದೆ.ಜಿಲ್ಲೆಯ 2301 ಜನರ ಪಟ್ಟಿಯನ್ನು ಕೇಂದ್ರ ಕೃಷಿ ಇಲಾಖೆಗೆ ಕಳಿಸಿಕೊಟ್ಟಿದ್ದು, ಆಯಾ ತಾಲೂಕಿನ ಕೃಷಿ ಇಲಾಖೆ ಅಧಿಕಾರಿಗಳು ಅವರಿಗೆ ನೋಟಿಸ್ ಜಾರಿ ಮಾಡಿ ಪಡೆದ ಹಣವನ್ನು ಡಿಡಿ ಮೂಲಕ ಸಂಬಂಧಪಟ್ಟ ಕೃಷಿ ಅಧಿಕಾರಿಗೆ ಹಿಂತಿರುಗಿಸುವಂತೆ ಸೂಚಿಸಲಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 1.66 ಲಕ್ಷ ರೈತರು ಕಿಸಾನ್ ಸಮ್ಮಾನ ಯೋಜನೆಯಲ್ಲಿ ಹೆಸರು ನೋಂದಾಯಿಸಿ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6 ಸಾವಿರ ರೂ. ಸಹಾಯಧನವನ್ನು ಪಡೆದಿದ್ದಾರೆ.
ಸರ್ಕಾರದ ಸೂಚನೆಯಂತೆ ತಪ್ಪು ಮಾಹಿತಿ ನೀಡುವವರಿಗೆ ನೋಟಿಸ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ನಂತರ ಹಣ ವಸೂಲಾತಿ ಮಾಡಲಾಗುವುದು. | ಹೊನ್ನಪ್ಪ ಗೋವಿಂದ ಗೌಡ ಕೃಷಿ ಇಲಾಖೆ ಜಂಟಿ ನಿರ್ದೇಶಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 16 =
Remember me
